ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಬೆಂಗಳೂರಿನಿಂದ ಸಾವಿರಾರು ಜನರು ತಮ್ಮ-ತಮ್ಮ ಊರಿನತ್ತ ಮುಖ ಮಾಡಿದ್ದು, ಎಲ್ಲ ಬಸ್‌ಗಳು ಫುಲ್ ರಶ್ ಆಗಿ ಪ್ರಯಾಣಿಸುತ್ತಿವೆ.
Advertisement
ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಈಗಾಗಲೇ ಟಿಕೆಟ್ ಬುಕ್ಕಿಂಗ್ ಹೆಚ್ಚಾಗಿದ್ದು, ಆದಾಯವೂ ಹರಿದುಬರುತ್ತಿದೆ. ಇಂದಿನಿಂದಲೇ ಬುಕ್ಕಿಂಗ್ ಹೌಸ್‌ಫುಲ್ ಆಗಿದ್ದು, ಸ್ಥಳದಲ್ಲೇ ಟಿಕೆಟ್ ಖರೀದಿಸಿ ಹೋಗುವವರು ನಿಂತುಕೊಂಡೇ ಪ್ರಯಾಣಿಸಬೇಕಿದೆ. ಸದ್ಯ ಮೂರು ದಿನಗಳ ಕಾಲ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಬಾರೀ ಬೇಡಿಕೆ ಹೆಚ್ಚಿದೆ. ಇದನ್ನೂ ಓದಿ: ಅಂದು ಗಾಯಾಳು, ಇಂದು ಮ್ಯಾಚ್ ವಿನ್ನರ್ – ಹಳೆಯ ಘಟನೆ ಬಿಚ್ಚಿಟ್ಟ ಪಾಂಡ್ಯ
Advertisement
Advertisement
22 ಸಾವಿರ ಸೀಟುಗಳು ಬುಕ್: ಇಂದು (ಆ.29) 8, 8,006, ಆ.30 ರಂದು 9,206, ಆ.31 ರಂದು 5,692 ಸೀಟುಗಳು ಈಗಾಗಲೇ ಕಾಯ್ದಿರಿಸಲಾಗಿದೆ. ಇಂದು 40 ಬಸ್ಸುಗಳು ಹಾಗೂ ನಾಳೆ ಆಗಸ್ಟ್ 30 ರಂದು 67 ಬಸ್ಸುಗಳನ್ನು ಕಾಯ್ದಿರಿಸಲಾಗಿದ್ದು, ಹೆಚ್ಚುವರಿಯಾಗಿ 500 ಬಸ್ಸುಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.