– 1998ರಲ್ಲಿ ನಡೆದ ಭಯಾನಕ ಘಟನೆ ತನಿಖೆ ವೇಳೆ ಬಯಲು
ಲಕ್ನೋ: ಮೃತ ಗ್ಯಾಂಗ್ಸ್ಟರ್ ವಿಕಾಸ್ ದುಬೆ ಕುಟುಂಬ 22 ವರ್ಷದ ಹಿಂದೆಯೇ ಪೊಲೀಸರನ್ನು ಅಟ್ಟಾಡಿಸಿಕೊಂಡು ಹೊಡೆದಿತ್ತು ಎಂಬ ಭಯಾನಕ ಸುದ್ದಿ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಹೌದು ಎಂಟು ಪೊಲೀಸರನ್ನು ನರಬಲಿ ಪಡೆದಿದ್ದ ವಿಕಾಸ್ ದುಬೆ, ಈ ಹಿಂದೆಯೂ ಕೂಡ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಎಂಬ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಈ ಹಿಂದೆ ಕೂಡ ದುಬೆಯನ್ನು ಅರೆಸ್ಟ್ ಮಾಡಲು ಬಿಕ್ರು ಗ್ರಾಮಕ್ಕೆ ಹೋಗಿದ್ದ ಪೊಲೀಸರನ್ನು ದುಬೆ ಕುಟುಂಬ ಸೇರಿಕೊಂಡು ಹೊಡೆದು ಅಲ್ಲಿಂದ ಓಡಿಸಿತ್ತು. ಅಂದು ಯಾವ ಪೊಲೀಸ್ ಮೃತಪಟ್ಟಿರಲಿಲ್ಲ.
Advertisement
Advertisement
1998ರಲ್ಲಿ ಕೊಲೆ ಅಪರಾಧದ ಮೇಲೆ ಬೇಕಾಗಿದ್ದ ವಿಕಾಸ್ ದುಬೆ ಮತ್ತು ಆತನ ಸಹೋದರ ದೀಪು ದುಬೆಯನ್ನು ಅರೆಸ್ಟ್ ಮಾಡಲು ಪೊಲೀಸರು ಅವರ ಗ್ರಾಮಕ್ಕೆ ತೆರೆಳಿದ್ದರು. ಈ ವೇಳೆ ಆಯುಧಗಳ ಸಮೇತ ಬಂದು ರಸ್ತೆಯನ್ನು ಬ್ಲಾಕ್ ಮಾಡಿದ್ದ ದುಬೆ ಕುಟುಂಬ, ಪೊಲೀಸರನ್ನು ಅಟ್ಟಾಡಿಸಿಕೊಂಡು ಹೊಡೆದಿತ್ತು. ಅಂದು ಕಡಿಮೆ ಪೊಲೀಸ್ ಸಿಬ್ಬಂದಿ ಇದ್ದ ಕಾರಣ ಪೊಲೀಸರು ತಪ್ಪಿಸಿಕೊಂಡು ಬಂದಿದ್ದರು. ಅಂದು ಕೂಡ ವಿಕಾಸ್ ದುಬೆ ತಪ್ಪಿಸಿಕೊಂಡಿದ್ದ.
Advertisement
Advertisement
ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲೆಂದು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು ದುಬೆ ಅವಿತಿದ್ದ ಮನೆಯತ್ತ ಆಗಮಿಸುತ್ತಿದ್ದರು. ಈ ವೇಳೆ ಗುಂಡಿನ ಮಳೆ ಸುರಿಸಿದ್ದಾರೆ. ಪರಿಣಾಮ ಡಿವೈಎಸ್ಪಿ ದೇವೇಂದ್ರ ಮಿಶ್ರಾ, ಮೂವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳು ಹಾಗೂ 4 ಪೊಲೀಸರು ಮೃತಪಟ್ಟಿದ್ದರು.
ದುಬೆ ಎನ್ಕೌಂಟರ್:
ಎಂಟು ಪೊಲೀಸರನ್ನು ಹತ್ಯೆ ಮಾಡಿದ್ದ ಗ್ಯಾಂಗ್ಸ್ಟರ್ ವಿಕಾಸ್ ದುಬೆಯನ್ನು ಜುಲೈ 10ರಂದು ಮುಂಜಾನೆ ಉತ್ತರಪ್ರದೇಶದ ಪೊಲೀಸರು ಎನ್ಕೌಂಟರ್ ಮಾಡಿದ್ದರು. ವಿಕಾಸ್ ದುಬೆಯನ್ನು ಬಂಧಿಸಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಮಧ್ಯ ಪ್ರದೇಶದಿಂದ ಕಾನ್ಪುರಕ್ಕೆ ವಾಪಸ್ ಕರೆತರಲಾಗುತ್ತಿತ್ತು. ಆದರೆ ಕಾನ್ಪುರದ ಬಾರ್ರಾ ಪೊಲೀಸ್ ವಲಯಕ್ಕೆ ತಲುಪುತ್ತಿದ್ದಂತೆ ವಿಕಾಸ್ ದುಬೆ ಕುಳಿತಿದ್ದ ವಾಹನವು ಭಾರೀ ಮಳೆಯಿಂದಾಗಿ ರಸ್ತೆಯಲ್ಲಿ ಪಲ್ಟಿಯಾಗಿದೆ.
ಆಗ ಪೊಲೀಸರು ವಿಕಾಸ್ನನ್ನು ವಾಹನದಿಂದ ಹೊರಗೆ ಎಳೆದುಕೊಂಡಿದ್ದಾರೆ. ಈ ವೇಳೆ ಆರೋಪಿ ಗಾಯಗೊಂಡ ಪೊಲೀಸರೊಬ್ಬರಿಂದ ಬಂದೂಕನ್ನು ಕಿತ್ತುಕೊಂಡು ಪೊಲೀಸರ ಮೇಲೆ ಗುಂಡು ಹಾರಿಸಲು ಯತ್ನಿಸಿದ್ದಾನೆ. ಆಗ ಪೊಲೀಸರು ಕೂಡ ಗುಂಡಿನ ದಾಳಿ ಮಾಡಿದ್ದರು. ಈ ಶೂಟೌಟ್ನಲ್ಲಿ ಪೊಲೀಸರು ಆರೋಪಿ ವಿಕಾಸ್ ದುಬೆಯನ್ನ ಎನ್ಕೌಂಟರ್ ಮಾಡಿದ್ದರು. ಪರಿಣಾಮ ಗ್ಯಾಂಗ್ಸ್ಟರ್ ವಿಕಾಸ್ ದುಬೆ ಎನ್ಕೌಂಟರ್ಗೆ ಬಲಿಯಾಗಿದ್ದ.