ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 222 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 2 ಮರಣ ಪ್ರಕರಣ ದಾಖಲಾಗಿದೆ. ಜೊತೆಗೆ ಇತ್ತ ಓಮಿಕ್ರಾನ್ ಪಾಸಿಟಿವ್ ಕೇಸ್ಗಳ ಸಂಖ್ಯೆ ಏರಿಕೆ ಕಾಣುತ್ತಿದೆ. ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 19ಕ್ಕೆ ಏರಿಕೆ ಕಂಡಿದೆ.
Advertisement
ಇಂದು 5 ಒಮಿಕ್ರಾನ್ ಕೇಸ್ ಪತ್ತೆಯಾಗಿದ್ದು, ಧಾರವಾಡ, ಭದ್ರಾವತಿ, ಉಡುಪಿ ಮತ್ತು ಮಂಗಳೂರಿನಲ್ಲಿ ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಈ ನಡುವೆ ರಾಜ್ಯದಲ್ಲಿ ಒಟ್ಟು 286 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,074 ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 30,02,649 ಮಂದಿಗೆ ಕೊರೊನಾ ಬಂದಿದೆ. 29,57,256 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.90 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.25 ರಷ್ಟಿದೆ. ಇದನ್ನೂ ಓದಿ: ಉಡುಪಿಯ ಇಬ್ಬರಲ್ಲಿ ಓಮಿಕ್ರಾನ್ ವೈರಸ್ ಪತ್ತೆ
Advertisement
Advertisement
ರಾಜ್ಯದಲ್ಲಿ ಇಂದು ಒಟ್ಟು 2,40,783 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 87,469 ಸ್ಯಾಂಪಲ್ (ಆರ್ಟಿಪಿಸಿಆರ್ 76,430 + 11,039 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಓಮಿಕ್ರಾನ್ ಆತಂಕ – ವಿದೇಶದಿಂದ ಬಂದ 17 ಜನ ಕ್ವಾರಂಟೈನ್
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 146, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 6, ದಾವಣಗೆರೆ 0, ಧಾರವಾಡ 2, ಗದಗ 0, ಹಾಸನ 7, ಹಾವೇರಿ 0, ಕಲಬುರಗಿ 4, ಕೊಡಗು 10, ಕೋಲಾರ 9, ಕೊಪ್ಪಳ 1, ಮಂಡ್ಯ 5, ಮೈಸೂರು 10, ರಾಯಚೂರು 0, ರಾಮನಗರ 0, ಶಿವಮೊಗ್ಗ 2, ತುಮಕೂರು 3, ಉಡುಪಿ 5, ಉತ್ತರ ಕನ್ನಡ 3, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.