ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 222 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ. ಇನ್ನೊಂದೆಡೆ ಬೆಂಗಳೂರು ನಗರದಲ್ಲಿ ಕಳೆದ ಕೆಲ ದಿನಗಳಿಂದ ಇನ್ನೂರಕ್ಕೂ ಅಧಿಕ ಪಾಸಿಟಿವ್ ಕೇಸ್ಗಳು ವರದಿಯಾಗುತ್ತಿದೆ. ಇಂದು ಬೆಂಗಳೂರು ನಗರದಲ್ಲಿ 210 ಕೇಸ್ ದಾಖಲಾಗಿದೆ.
ಬೆಂಗಳೂರಿನಲ್ಲಿ ನಿನ್ನೆಗಿಂತ ಕೇಸ್ ಇಳಿಕೆ ಕಂಡರೂ ಸಕ್ರಿಯ ಪ್ರಕರಣಗಳ ಸಂಖ್ಯೆ 2,146ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ಹೊರತು ಪಡಿಸಿ ಉಡುಪಿಯಲ್ಲಿ ದಾಖಲಾದ 4 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,260ಕ್ಕೆ ತಲುಪಿದೆ. ಇದನ್ನೂ ಓದಿ: ಕೋವಿಡ್ ಬೂಸ್ಟರ್ ಶಾಟ್ ಆಗಿ ಕಾರ್ಬೆವ್ಯಾಕ್ಸ್ ತೆಗೆದುಕೊಳ್ಳಬಹುದು: DCGI
ಬೆಂಗಳೂರು ಹೊರತು ಪಡಿಸಿ ಉಳಿದಂತೆ 6 ಜಿಲ್ಲೆಗಳಲ್ಲಿ 12 ಕೇಸ್ ಮತ್ತು 24 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 191 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 0.93 ದಾಖಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 40,065 ಮರಣ ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ಕೊರೊನಾ ಭೀತಿ: ಸಾರ್ವಜನಿಕ ಸ್ಥಳಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯ
ಈವರೆಗೆ ರಾಜ್ಯದಲ್ಲಿ ಒಟ್ಟು 39,53,058 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,10,691 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 69,891 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 23,644 ಸ್ಯಾಂಪಲ್ (ಆರ್ಟಿಪಿಸಿಆರ್ 17,664 + 5,980 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 210, ಉಡುಪಿ 4, ಚಿತ್ರದುರ್ಗ 2, ಬಳ್ಳಾರಿ, ಚಿಕ್ಕಮಗಳೂರು, ದಕ್ಷಿಣಕನ್ನಡ, ಕಲಬುರಗಿ, ರಾಯಚೂರು ಮತ್ತು ತುಮಕೂರಿನಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 222 ಕೇಸ್ ವರದಿಯಾಗಿದೆ.