ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 224 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 148 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 163 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಶೂನ್ಯ ಮರಣ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ 317 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,090 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,89,713 ಮಂದಿಗೆ ಕೊರೊನಾ ಬಂದಿದೆ. 29,43,487 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.23 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.37 ರಷ್ಟಿದೆ. ಇದನ್ನೂ ಓದಿ: ಮನೆಯಲ್ಲಿ ಸಿಲಿಂಡರ್ ಬ್ಲಾಸ್ಟ್ 7 ಕಾರ್ಮಿಕರಿಗೆ ಗಾಯ
ಇಂದು ರಾಜ್ಯದಲ್ಲಿ ಒಟ್ಟು 4,14,324 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 59,144 ಸ್ಯಾಂಪಲ್ (ಆರ್ಟಿ ಪಿಸಿಆರ್ 50,466 + 8,678 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಯುವಕನ ಕೊಲೆಗೈದು ಮನೆ ಗೇಟ್ ಮುಂಭಾಗ ಎಸೆದು ಹೋದ್ರು!
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 148, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 3, ದಕ್ಷಿಣ ಕನ್ನಡ 15, ದಾವಣಗೆರೆ 1, ಧಾರವಾಡ 0, ಗದಗ 0, ಹಾಸನ 4, ಹಾವೇರಿ 0, ಕಲಬುರಗಿ 0, ಕೊಡಗು 1, ಕೋಲಾರ 6, ಕೊಪ್ಪಳ 0, ಮಂಡ್ಯ 7, ಮೈಸೂರು 9, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 7, ಉಡುಪಿ 10, ಉತ್ತರ ಕನ್ನಡ 3, ವಿಜಯಪುರ, ಮತ್ತು ಯಾದಗಿರಿಯಲ್ಲಿ ಇಂದು ಕೂಡ ಶೂನ್ಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರೂ. – ಸರ್ಕಾರದಿಂದ ಅಧಿಕೃತ ಅಧಿಸೂಚನೆ