ಶಿವಮೊಗ್ಗ: ಮಲೆನಾಡಿನ ಭಾಗದಲ್ಲಿ ಮೊಬೈಲ್ ನೆಟ್‍ವರ್ಕ್ (Mobile Network) ಹಾಗೂ ಇಂಟರ್ನೆಟ್ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಶಿವಮೊಗ್ಗ (Shivamogga) ಲೋಕಸಭಾ ಕ್ಷೇತ್ರಕ್ಕೆ 4ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಸರ್ಕಾರ ಅನುಮತಿ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ (BY Raghavendra) ತಿಳಿಸಿದ್ದಾರೆ.
ಶನಿವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಸಾಗರ ತಾಲೂಕಿಗೆ 89, ಹೊಸನಗರಕ್ಕೆ 35, ತೀರ್ಥಹಳ್ಳಿಗೆ 27, ಶಿವಮೊಗ್ಗಕ್ಕೆ 18, ಶಿಕಾರಿಪುರಕ್ಕೆ 13, ಭದ್ರಾವತಿ ಹಾಗೂ ಸೊರಬ ತಾಲೂಕಿಗೆ ತಲಾ 8 ಮತ್ತು ಬೈಂದೂರಿಗೆ 25 ಟವರ್‍ಗಳು ಮಂಜೂರಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್ – ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು
- Advertisement
ಮೊದಲ ಮೂರು ಹಂತಗಳಲ್ಲಿ ಶಿವಮೊಗ್ಗ ಜಿಲ್ಲೆಯ 112 ಹಾಗೂ ಬೈಂದೂರು ಕ್ಷೇತ್ರದಲ್ಲಿ 25 ಟವರ್ ಸ್ಥಾಪನೆಗೆ ಅನುಮತಿ ದೊರಕಿದೆ. ಈಗಾಗಲೇ ಬಿಎಸ್‍ಎನ್‍ಎಲ್ (BSNL) ಸಂಸ್ಥೆಯು ಟವರ್ ಸ್ಥಾಪನೆಗೆ ಸೂಕ್ತ ಜಾಗಗಳ ಗುರುತಿಸಲಾಗಿದೆ. ಭೂಮಿ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
- Advertisement
ಪ್ರತಿ ಟವರ್ ನಿರ್ಮಾಣಕ್ಕೆ 75 ಲಕ್ಷ ರೂ.ಗಳಿಂದ 1 ಕೋಟಿ ರೂ.ವರೆಗೆ ವೆಚ್ಚವಾಗಲಿದೆ. 225 ಟವರ್ ನಿರ್ಮಾಣಕ್ಕೆ ಸುಮಾರು 200 ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನವನ್ನು ಕೇಂದ್ರ ಸರ್ಕಾರ ಭರಿಸಲಿದೆ. ಅನುಮತಿ ದೊರಕಿರುವ ಸ್ಥಳಗಳಲ್ಲಿ 2023ರ ಡಿಸೆಂಬರ್ ಒಳಗಾಗಿ ಮೊಬೈಲ್ ಟವರ್ ಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮಲೆನಾಡಿನ ಕುಗ್ರಾಮಗಳಲ್ಲಿ ಸಂಪರ್ಕ ಸುಧಾರಣೆಗೆ ಕ್ರಮಕೈಗೊಳ್ಳುವಂತೆ ಹಾಗೂ ಹೊಸ ಮೊಬೈಲ್ ಟವರ್ ನಿರ್ಮಿಸುವಂತೆ ಸಂಸದರು ಕೇಂದ್ರಕ್ಕೆ ಮನವಿ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಹೆಚ್ಚಿನ ಸಂಖ್ಯೆಯ ಮೊಬೈಲ್ ಟವರ್ ನಿರ್ಮಾಣಕ್ಕೆ ಅನುಮತಿ ನೀಡಿದ ಕೇಂದ್ರ ದೂರ ಸಂಪರ್ಕ (Department of Telecommunication) ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ರಾಘವೇಂದ್ರ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಭಾರತದ ನೂತನ ಸಂಸತ್ ಭವನಕ್ಕೆ ದೇಶದ ವಿವಿಧತೆಯ ಮೆರುಗು