– ಬೆಂಗಳೂರಿನಲ್ಲಿ 5,701 ಕೇಸ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿಧಾನವಾಗಿ ಕಡಿಮೆಯಾಗುತ್ತಿದ್ದು, ಕರ್ನಾಟಕದಲ್ಲಿ ಇಂದು 22,758 ಮಂದಿಗೆ ಸೋಂಕು ತಗುಲಿದ್ದು, 588 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. 38,224 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಲ್ಲಿಯವರೆಗೆ ರಾಜ್ಯದಲ್ಲಿ 24,729,73 ಮಂದಿಗೆ ಕೊರೊನಾ ಬಂದಿದ್ದು, ಈ ಪೈಕಿ ಒಟ್ಟು 20,22,172 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,24,381ಕ್ಕೆ ತಲುಪಿದೆ.
ಇಂದು 588 ಜನ ಕೊರೊನಾಗೆ ಬಲಿಯಾಗಿದ್ದು, ಈ ವರೆಗೆ ರಾಜ್ಯದಲ್ಲಿ ಒಟ್ಟು 26,399 ಜನ ಸಾವನ್ನಪ್ಪಿದ್ದಾರೆ. ಇಂದು 38,224 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಕೋವಿಡ್ ಸೋಂಕಿನ ಖಚಿತ ಪ್ರಮಾಣ ಶೇ.21.13ರಷ್ಟಿದ್ದು, ಮೃತರ ಪ್ರಮಾಣ ಶೇ.2.58ರಷ್ಟಿದೆ. ಏಪ್ರಿಲ್ ತಿಂಗಳಿನಲ್ಲಿ ಮೃತಪಟ್ಟವರ ವಿವರಗಳು ತಡವಾಗಿ ಬೆಳಕಿಗೆ ಬರುತ್ತಿರುವ ಕಾರಣ ಈಗ ಸಾವಿನ ಸಂಖ್ಯೆ ಜಾಸ್ತಿಯಾಗುತ್ತಿದೆ.
ಇಂದು 26,266 ಆಂಟಿಜನ್ ಟೆಸ್ಟ್, 81,409 ಆರ್‌ಟಿಪಿಸಿಆರ್ ಸೇರಿದಂತೆ ಒಟ್ಟು 1,07,675 ಕೊರೊನಾ ಪರೀಕ್ಷೆ ಮಾಡಲಾಗಿದೆ. ಇಂದು ರಾಜ್ಯದಲ್ಲಿ ಒಟ್ಟು 64,156 ಮಂದಿಗೆ ಲಸಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ 6,243 ಮಂದಿಗೆ ಕೊರೊನಾ ದೃಢಪಟ್ಟಿದ್ದು, 350 ಜನ ಸಾವನ್ನಪ್ಪಿದ್ದಾರೆ. ಇನ್ನೂ 2,19,551 ಸಕ್ರಿಯ ಪ್ರಕರಣಗಳಿವೆ. ಮೈಸೂರು 2,241, ಹಾಸನ 1,285, ತುಮಕೂರು 1,312, ಬೆಳಗಾವಿ 1,260 ಪ್ರಕರಣಗಳು ವರದಿಯಾಗಿವೆ.