ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರಣ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ.
Advertisement
ಅಖಿಲಾ (23) ಮೃತ ಯುವತಿ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ ಖಾಸಗಿ ಖಾಲೆಯೊಂದರಲ್ಲಿ ಕಳೆದ ಎರಡು ವರ್ಷದಿಂದ ಅಡ್ಮಿನಿಸ್ಟ್ರೇಷನ್ ಡಿಪಾರ್ಟ್‍ಮೆಂಟ್‍ನಲ್ಲಿ ಕೆಲಸ ಮಾಡುತ್ತಿದ್ದರು. ಇವರ ತಂದೆ ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಆದರೆ ಸೋಮವಾರ ರಾತ್ರಿ 8 ಗಂಟೆಗೆ ಕೆಲಸ ಮುಗಿಸಿಕೊಂಡು ಶಾಲೆಯಿಂದ ಹೊರಟಿದ್ದರು. ಇದನ್ನೂ ಓದಿ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಯುವಕ ಮರ್ಡರ್
Advertisement
Advertisement
ರಾತ್ರಿ 9.30ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ ಬೇಕರಿ ಸಮೀಪ ಬಂದಿದ್ದಾರೆ. ಈ ವೇಳೆ ಭಾರೀ ಮಳೆ ಸುರಿಯುತ್ತಿದ್ದ ರಸ್ತೆಯಲ್ಲಿ ಮಂಡಿಯುದ್ದಕ್ಕೆ ನೀರು ನಿಂತಿತ್ತು. ನೀರಿನ ಮಧ್ಯೆಯೇ ಸ್ಕೂಟರ್ ಚಲಾಯಿಸಿಕೊಂಡು ಬಂದ ಅಖಿಲಾ ಅವರು ಸ್ಕೂಟರ್ ನೀರು ಹೆಚ್ಚಿದ್ದರಿಂದ ಇದ್ದಕ್ಕಿದ್ದಂತೆ ಆಫ್ ಆಗಿದೆ. ಈ ವೇಳೆ ಕೆಳಗೆ ಬೀಳುತ್ತಿದ್ದ ಅಖಿಲಾ ಸಹಾಯಕ್ಕೆ ಬಲ ಭಾಗದಲ್ಲಿಯೇ ಇದ್ದ ಎಲೆಕ್ಟ್ರಿಕಲ್ ಪೋಲ್ ಮುಟ್ಟಿದ್ದಾರೆ. ಈ ವೇಳೆ ವಿದ್ಯುತ್ ಸ್ಪರ್ಶವಾಗಿ ಸಾವನ್ನಪ್ಪಿದ್ದಾರೆ.
Advertisement
ನಂತರ ಕೆಳಗೆ ಬಿದ್ದ ಯುವತಿಯನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಅಖಿಲಾ ಕೊನೆಯುಸಿರೆಳೆದಿದ್ದಾರೆ. ನೀರು ಹೊರ ಹೋಗಲು ಸರಿಯಾದ ವ್ಯವಸ್ಥೆ ಮಾಡದೇ, ಬೆಸ್ಕಾಂ ವಿದ್ಯುತ್ ಕಂಬಗಳ ಸರಿಯಾದ ನಿರ್ವಹಣೆ ಮಾಡದೇ ಇರುವುದೇ ಅಖಿಲಾ ಸಾವಿಗೆ ನೇರ ಕಾರಣ ಎಂದು ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಒಲ್ಲದ ವಿವಾಹ – ವಿಷ ಸೇವಿಸಿ ನವ ವಿವಾಹಿತೆ ಆತ್ಮಹತ್ಯೆ
ಇದೀಗ ಘಟನಾ ಸ್ಥಳಕ್ಕೆ ವೈಟ್ ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ವೈದೇಹಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ. ಬೆಸ್ಕಾಂ ಹಾಗೂ ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಯುವತಿ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ.