ಬೆಂಗಳೂರು: ಮದುವೆಯಾದ ಒಂಬತ್ತೇ ತಿಂಗಳಿಗೆ 23 ವರ್ಷದ ಗೃಹಿಣಿಯೊಬ್ಬರು ಗಂಡನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಣನಕುಂಟೆ (Crime) ಬಳಿ ನಡೆದಿದೆ.
23 ವರ್ಷದ ಸಿರಿಶಾ ಮೃತ ಗೃಹಿಣಿ. ಜಂಬೂಸವಾರಿ ದಿಣ್ಣೆ ಬಳಿಯ ಅಪಾರ್ಟ್ಮೆಂಟ್ನಲ್ಲಿ ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡ ಪ್ರಶಾಂತ್ ಮತ್ತು ಅತ್ತೆ ರುಕ್ಮಿಣಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಮಾನಸಿಕವಾಗಿಯೂ ಹಿಂಸೆ ನೀಡಿದ್ದಾರೆ. ಅದೇ ಕಾರಣಕ್ಕೆ ಸಿರಿಶಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಇದನ್ನೂ ಓದಿ: ಲಕ್ನೋ-ಆಗ್ರಾ ಎಕ್ಸ್ಪ್ರೆಸ್ವೇನಲ್ಲಿ ಕಂದಕಕ್ಕೆ ಉರುಳಿದ ಬಸ್; ಮೂವರು ದುರ್ಮರಣ, 45 ಪ್ರಯಾಣಿಕರಿಗೆ ಗಾಯ
