ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 230 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ. ಈ ಮೂಲಕ ನಿನ್ನೆಗಿಂತ ಕಡಿಮೆ ಕೇಸ್ ದಾಖಲಾದರೂ ಬೆಂಗಳೂರು ನಗರದಲ್ಲಿ ಮಾತ್ರ ಇನ್ನೂರಕ್ಕೂ ಅಧಿಕ ಪಾಸಿಟಿವ್ ಕೇಸ್ಗಳು ವರದಿಯಾಗುತ್ತಿದೆ. ಇಂದು ಬೆಂಗಳೂರು ನಗರದಲ್ಲಿ 222 ಕೇಸ್ ದಾಖಲಾಗಿದೆ.
ಈ ಮೂಲಕ ಬೆಂಗಳೂರು ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 2,328ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣ ಹತೋಟಿಯಲ್ಲಿದೆ. ಕೋಲಾರದಲ್ಲಿ ದಾಖಲಾದ 3 ಪ್ರಕರಣ ಜಿಲ್ಲೆಯೊಂದರಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,441ಕ್ಕೆ ತಲುಪಿದೆ. ಇದನ್ನೂ ಓದಿ: ಮೋಹಕತಾರೆ ರಮ್ಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್
ಬೆಂಗಳೂರು ಹೊರತು ಪಡಿಸಿ ಉಳಿದಂತೆ 6 ಜಿಲ್ಲೆಗಳಲ್ಲಿ 8 ಕೇಸ್ ಮತ್ತು 23 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 203 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 1.92 ದಾಖಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 40,066 ಮರಣ ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ಪತಿ ಎಂದು ತಿಳಿದು 4 ದಿನ ಚಾಪೆ ಮೇಲೆ ಹಾವಿನ ಜೊತೆಗಿದ್ದ ವೃದ್ಧೆ
ಈವರೆಗೆ ರಾಜ್ಯದಲ್ಲಿ ಒಟ್ಟು 39,53,589 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,11,040 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 59,126 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 11,962 ಸ್ಯಾಂಪಲ್ (ಆರ್ಟಿಪಿಸಿಆರ್ 9,344 + 2,618 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 222, ಕೋಲಾರ 3, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡದಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 230 ಕೇಸ್ ವರದಿಯಾಗಿದೆ.