ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 236 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ಒಟ್ಟು 2 ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ ರಾಜ್ಯದಲ್ಲಿ ಒಟ್ಟು 245 ಪ್ರಕರಣ ದಾಖಲಾಗಿತ್ತು. ಈ ಪೈಕಿ ಇಂದು 9 ಪ್ರಕರಣ ಇಳಿಕೆ ಕಂಡಿದೆ. ಇಂದಿನ 2 ಸಾವಿನ ಪ್ರಕರಣ ಕೂಡ ಬೆಂಗಳೂರಿನಲ್ಲಿ ದಾಖಲಾಗಿದ್ದು, ಉಳಿದ 29 ಜಿಲ್ಲೆಗಳಲ್ಲಿ ಇಂದು ಕೂಡ ಶೂನ್ಯ ಮರಣ ಪ್ರಕರಣ ದಾಖಲಾಗಿದೆ.
Advertisement
ಬೆಂಗಳೂರು ನಗರದಲ್ಲಿ 152 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 187 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 2 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ 264 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,997 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,91,850 ಮಂದಿಗೆ ಕೊರೊನಾ ಬಂದಿದೆ. 29,45,678 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.84 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.24 ರಷ್ಟಿದೆ. ಇದನ್ನೂ ಓದಿ: ಎಮ್ಮೆ ಹಾಲು ಕೊಡ್ತಿಲ್ಲ, ಯಾರೋ ಮಾಟ ಮಾಡ್ಸಿದ್ದಾರೆಂದು ಪೊಲೀಸ್ ಠಾಣೆಗೆ ದೂರು ನೀಡಿದ ರೈತ!
Advertisement
Advertisement
ಇಂದು ರಾಜ್ಯದಲ್ಲಿ ಒಟ್ಟು 26,805 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 96,838 ಸ್ಯಾಂಪಲ್ (ಆರ್ಟಿಪಿಸಿಆರ್ 80,573 + 16,265 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 9, ಬೆಂಗಳೂರು ನಗರ 152, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 0, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 11, ಹಾವೇರಿ 0, ಕಲಬುರಗಿ 0, ಕೊಡಗು 4, ಕೋಲಾರ 7, ಕೊಪ್ಪಳ 0, ಮಂಡ್ಯ 1, ಮೈಸೂರು 10, ರಾಯಚೂರು 0, ರಾಮನಗರ 0, ಶಿವಮೊಗ್ಗ 5, ತುಮಕೂರು 5, ಉಡುಪಿ 6, ಉತ್ತರ ಕನ್ನಡ 6, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಹಿಳೆಯ ಫೋಟೋ ಮಾರ್ಫಿಂಗ್ – ಸೋದರ ಸಂಬಂಧಿ ಅರೆಸ್ಟ್