ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 239 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 151 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 150 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇಂದು ಇಬ್ಬರು ಸಾವನ್ನಪ್ಪಿದ್ದಾರೆ.
Advertisement
ರಾಜ್ಯದಲ್ಲಿ 322 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,002 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,89,952 ಮಂದಿಗೆ ಕೊರೊನಾ ಬಂದಿದೆ. 29,43,809 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.09 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.21 ರಷ್ಟಿದೆ.
Advertisement
Advertisement
ಇಂದು ರಾಜ್ಯದಲ್ಲಿ ಒಟ್ಟು 6,64,57,821 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,10,220 ಸ್ಯಾಂಪಲ್ (ಆರ್ಟಿ ಪಿಸಿಆರ್ 81,331 + 28,889 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ರಾಜ್ಯದ ಎಲ್ಲ ಥಿಯೇಟರ್ಗಳಲ್ಲಿ ಏಕಕಾಲಕ್ಕೆ ಅಪ್ಪುಗೆ ಶ್ರದ್ಧಾಂಜಲಿ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 151, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 3, ಚಿತ್ರದುರ್ಗ 0, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 6, ಗದಗ 0, ಹಾಸನ 12, ಹಾವೇರಿ 0, ಕಲಬುರಗಿ 0, ಕೊಡಗು 4, ಕೋಲಾರ 2, ಕೊಪ್ಪಳ 0, ಮಂಡ್ಯ 5, ಮೈಸೂರು 17, ರಾಯಚೂರು 0, ರಾಮನಗರ 0, ಶಿವಮೊಗ್ಗ 2, ತುಮಕೂರು 4, ಉಡುಪಿ 5, ಉತ್ತರ ಕನ್ನಡ 12, ವಿಜಯಪುರ, ಮತ್ತು ಯಾದಗಿರಿಯಲ್ಲಿ ಇಂದು ಕೂಡ ಶೂನ್ಯ ಪ್ರಕರಣ ದಾಖಲಾಗಿದೆ.
ಇಂದಿನ 07/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/7sqRBqEDCM
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/TTLC6NhGH8
— K'taka Health Dept (@DHFWKA) November 7, 2021