– ಸೋಂಕಿತರ ಸಂಖ್ಯೆ 1,73,763ಕ್ಕೆ ಏರಿಕೆ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,964 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆ ಅತಿದೊಡ್ಡ ಜಿಗಿತವನ್ನು ಕಂಡಿದೆ. ಜೊತೆಗೆ 265 ಜನರು ಕೋವಿಡ್-19ಗೆ ಬಲಿಯಾಗಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ, ದೇಶದಲ್ಲಿ ಈವರೆಗೂ 1,73,763 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಪೈಕಿ 86,422 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ 82,370 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 4,971 ಮಂದಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕೊರೊನಾ ಬಗ್ಗೆ ಗಮನ ಕೊಡಿ, ಬಾಕಿ ವಿಚಾರ ನಮಗೆ ಬಿಡಿ- ಬಿಎಸ್‍ವೈಗೆ ಅಮಿತ್ ಶಾ ಭರವಸೆ
Advertisement
Highest spike of 7,964 new #COVID19 cases and 265 deaths in the last 24 hours in India. Total number of cases in the country now at 1,73,763 including 86422 active cases, 82370 cured/discharged/migrated and 4971 deaths: Ministry of Health and Family Welfare pic.twitter.com/990tyBfGPe
— ANI (@ANI) May 30, 2020
Advertisement
ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 7,000ಕ್ಕೂ ಹೆಚ್ಚು ಕೋವಿಡ್-19 ಸೋಂಕಿತರು ಪತ್ತೆಯಾಗಿರುವುದು ಇದು ಸತತ ಎರಡನೇ ಬಾರಿಯಾಗಿದೆ. ಕಳೆದ ಕೆಲವು ದಿನಗಳಿಂದ 6,000ಕ್ಕೂ ಹೆಚ್ಚು ಜನರಿಗೆ ಸೋಂಕು ಪತ್ತೆಯಾಗುತ್ತಿತ್ತು. ಆದರೆ ಈಗ 7 ಸಾವಿರಕ್ಕೂ ಅಧಿಕ ಜನರಿಗೆ ಕೋವಿಡ್ ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
Advertisement
ಮಹಾರಾಷ್ಟ್ರ ಮತ್ತು ತಮಿಳುನಾಡು ಎರಡೂ ರಾಜ್ಯಗಳು ಕೋವಿಡ್-19ನಿಂದ ಹೆಚ್ಚು ಹಾನಿಗೊಳಗಾಗಿವೆ. ಮಹಾರಾಷ್ಟ್ರದಲ್ಲಿ ಒಂದೇ ದಿನ 116 ಜನ ಕೊರೊನಾಗೆ ಬಲಿಯಾಗಿದ್ದು, ಮೃತರ ಸಂಖ್ಯೆ 2,098ಕ್ಕೆ ತಲುಪಿದೆ. ರಾಜ್ಯದ 62 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ಪತ್ತೆಯಾಗಿದೆ.
Advertisement
ತಮಿಳುನಾಡಿನಲ್ಲಿ ಕಳೆದ 24 ಗಂಟೆಗಳಲ್ಲಿ 874 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿರ ಸಂಖ್ಯೆ 20 ಸಾವಿರದ ಗಡಿದಾಟಿದೆ. ತೆಲಂಗಾಣದಲ್ಲಿ ಶುಕ್ರವಾರ 169 ಮಮದಿಗೆ ಸೋಂಕು ಪತ್ತೆಯಾಗಿದ್ದು, ನಾಲ್ವರು ಮೃತಪಟ್ಟಿದ್ದರು. ಒಟ್ಟು 2,425 ಮಂದಿಗೆ ಕೊರೊನಾ ತಗುಲಿದೆ.