ನವದೆಹಲಿ: ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಭಾರತ ʻಆಪರೇಷನ್ ಸಿಂಧೂರʼ (Operation Sindoor) ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಭಿಕಾರಿಸ್ತಾನದ ಮೇಲೆ ಮಿಸೈಲ್‌ಗಳ ಸುರಿಮಳೆಗೈದಿದೆ. ಈ ನಡುವೆ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಆದ್ರೆ ಪಾಕ್ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತ (India) ದೇಶಾದ್ಯಂತ 24 ವಿಮಾನ ನಿಲ್ದಾಣಗಳ (Airports) ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಜಮ್ಮುವಿನ ಮೇಲೆ ದಾಳಿಗೆ ಯತ್ನಿಸಿದ್ದ ಪಾಕ್‌ನ 50ಕ್ಕೂ ಹೆಚ್ಚು ಡ್ರೋನ್‌ಗಳು ಮಟಾಶ್
ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು (Indian Airlines) ಪ್ರಯಾಣ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಪ್ಲ್ಯಾನ್ ಮಾಡಿಕೊಳ್ಳುವಂತೆ ತಿಳಿಸಿವೆ. ಇನ್ನೂ ದೇಶಾದ್ಯಂತ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇದನ್ನೂ ಓದಿ: ಪಾಕ್ ದಾಳಿಯನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಿದ್ದೇವೆ – ಭಾರತೀಯ ಸೇನೆ ಅಭಯ
ದೆಹಲಿ ಏರ್‌ಪೋರ್ಟ್ ಸಹಜ ಸ್ಥಿತಿಯಲ್ಲಿ ಕಾರ್ಯಾಚರಣೆ – ಕೆಲ ವಿಮಾನ ಹಾರಾಟ ರದ್ದು
ಇನ್ನೂ ದೇಶದ ರಾಜಧಾನಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಭದ್ರತೆ ಹೆಚ್ಚಿಸಿರುವ ಕಾರಣ ಕೆಲವು ವಿಮಾನಗಳ ಹಾರಾಟಗಳು ರದ್ದಾಗಿವೆ. ಪ್ರಯಾಣಿಕರು ತಮ್ಮ ವಿಮಾನಯಾನದ ಬಗ್ಗೆ ಮಾಹಿತಿ ತಿಳಿದುಕೊಂಡು ಏರ್‌ಪೋರ್ಟ್‌ಗೆ ಬರಲು ಸೂಚಿಸಲಾಗಿದೆ. ಇದನ್ನೂ ಓದಿ: ಪಾಕಿಸ್ತಾನಿಗಳಿಗೆ ಶಸ್ತ್ರಾಸ್ತ್ರಗಳನ್ನ ತ್ಯಜಿಸುವಂತೆ ಅಮೆರಿಕ ಹೇಳಲು ಸಾಧ್ಯವಿಲ್ಲ: ಜೆಡಿ ವ್ಯಾನ್ಸ್