ಶಿಮ್ಲಾ: ಶಾಲಾ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 24 ಶಾಲಾ ಮಕ್ಕಳು ಸೇರಿ 27 ಮಂದಿ ಮೃತಪಟ್ಟಿರುವ ದಾರುಣ ಘಟನೆ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿ ನಡೆದಿದೆ.
ಶಾಲೆ ಮುಗಿದ ಬಳಿಕ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೃತ ಪಟ್ಟ ಮಕ್ಕಳಲ್ಲಿ ಹೆಚ್ಚಿನವರು ಸ್ಥಳೀಯ ರಾಮ್ ಸಿಂಗ್ ಪಥಾನಿ ಮೆಮೋರಿಯಲ್ ಪಬ್ಲಿಕ್ ಶಾಲೆಯ 5ನೇ ತರಗತಿಗಿಂತ ಕೆಳಗಿನ ತರಗತಿಯವರು ಎಂದು ತಿಳಿದು ಬಂದಿದೆ.
Advertisement
ಘಟನೆ ಕುರಿತು ಮಾಹಿತಿ ಪಡೆದ ರಾಷ್ಟ್ರೀಯ ವಿಪತ್ತು ದಳ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯವನ್ನು ಕೈಗೊಂಡಿದೆ. ಇದುವರೆಗೆ 20 ಶವಗಳನ್ನು ಮೇಲಕ್ಕೆತ್ತಲಾಗಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.
Advertisement
Himachal Pradesh: At least 4 students killed, 25 injured when their school bus fell into a deep gorge in Kangra's Nurpur. NDRF team at the spot. Rescue operation underway. More details awaited. pic.twitter.com/U5hkigwQ3Q
— ANI (@ANI) April 9, 2018
Advertisement
ಶಾಲಾ ಬಸ್‍ನಲ್ಲಿ 40ಕ್ಕೂ ಹೆಚ್ಚು ಮಕ್ಕಳು ಇದ್ದರು ಎಂದು ಶಾಲಾಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ಪ್ರಧಾನಿ ಮೋದಿ, ಹಿಮಾಚಲ ಸಿಎಂ ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.
Advertisement
ಪ್ರತ್ಯಕ್ಷದರ್ಶಿಗಳ ಪ್ರಕಾರ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿ ಈ ದುರ್ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.
Kangra school bus accident #UPDATE: Death toll rises to 26. #HimachalPradesh
— ANI (@ANI) April 9, 2018