ಪಾಟ್ನಾ: ನಕಲಿ ಮದ್ಯ ಸೇವಿಸಿ 24 ಮಂದಿ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿರುವ ಘಟನೆ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಗೋಪಾಲ್‌ಗಂಜ್‌ನಲ್ಲಿ ನಡೆದಿದೆ. ಪರಿಣಾಮವಾಗಿ ಕಳೆದೆರಡು ದಿನಗಳಿಂದ ಸ್ಥಳದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
Advertisement
ಬೆಟ್ಟಿಯಾ ಬಳಿಯ ತೆಲ್ಹುವಾ ಗ್ರಾಮದಲ್ಲಿ ಕಳ್ಳಭಟ್ಟಿ ಸೇವಿಸಿ ಗುರುವಾರ 8 ಮಂದಿ ಮೃತಪಟ್ಟಿದ್ದರು. ಮತ್ತೆ ಗೋಪಾಲ್‌ಗಂಜ್‌ನಲ್ಲಿ ಶಂಕಿತ ನಕಲಿ ಮದ್ಯ ಸೇವಿಸಿ 16 ಮಂದಿ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇದನ್ನೂ ಓದಿ: ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು – ಹಲವು ರಸ್ತೆಗಳು ಜಲಾವೃತ
Advertisement
24 ಮಂದಿ ಸಾವಿಗೆ ನಿಖರ ಕಾರಣವನ್ನು ಜಿಲ್ಲಾಡಳಿತ ಇನ್ನೂ ಸ್ಪಷ್ಟಪಡಿಸಿಲ್ಲ. ತೆಲ್ಹುವಾದಲ್ಲಿ ಆಗಿರುವ ಕಳ್ಳಭಟ್ಟಿ ಪ್ರಕರಣವು ಉತ್ತರ ಬಿಹಾರ್‌ನಲ್ಲಿ ಸಂಭವಿಸಿದ ಮೂರನೇ ದುರಂತವಾಗಿದೆ. ಕಳೆದ 10 ದಿನಗಳ ಹಿಂದೆ ಇದೇ ಮಾದರಿಯಲ್ಲಿ ಸಾವು ಸಂಭವಿಸಿತ್ತು.
Advertisement
Advertisement
ಬಿಹಾರ ಸಚಿವ ಜಾನಕ್ ರಾಮ್ ಅವರು ಗೋಪಾಲ್‌ಗಂಜ್‌ಗೆ ಭೇಟಿ ನೀಡಿದ್ದಾರೆ. ನಂತರ ಮಾತನಾಡಿರುವ ಅವರು, ಶಂಕಿತ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿದ್ದೇನೆ. ಇದು ಎನ್‌ಡಿಎ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಮಾಡಿರುವ ಪಿತೂರಿಯಾಗಿರಬಹುದು ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಪುನೀತ್ ಸಾವಿನ ಬೆನ್ನಲ್ಲೆ ಹೆಚ್ಚಾಯ್ತು ಇಸಿಜಿ, ಹೃದಯಸಂಬಂಧಿ ಟೆಸ್ಟ್‌ಗಳು
ಘಟನೆ ಕುರಿತು ಪ್ರತಿಕ್ರಿಯಿಸಿರುವ ಗೋಪಾಲ್‌ಗಂಜ್ ಹಿರಿಯ ಪೊಲೀಸ್ ಅಧಿಕಾರಿ ಆನಂದ್ ಕುಮಾರ್, ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಜನರು ನಿಗೂಢವಾಗಿ ಸಾವನ್ನಪ್ಪುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಂಡಗಳು ತನಿಖೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.