ವಾಷಿಂಗ್ಟನ್: ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಹೊತ್ತಿಕೊಂಡ ಕಾಡ್ಗಿಚ್ಚು (Los Angeles Wildfire) ತನ್ನ ಅಗ್ನಿ ನರ್ತನ ಮುಂದುವರಿಸಿದೆ. ಸದ್ಯ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸಾವಿರಾರು ಎಕರೆ ಭೂಪ್ರದೇಶ ಬೆಂಕಿಜ್ವಾಲೆಗೆ ಭಸ್ಮವಾಗಿದ್ದು, ಆರ್ಥಿಕ ನಷ್ಟವುಂಟುಮಾಡಿದೆ. ಈ ನಡುವೆ ಬೆಂಕಿ ನಂದಿಸುವಲ್ಲಿ ವಿಫಲವಾಗಿರುವ ಕ್ಯಾಲಿಫೋರ್ನಿಯಾ ಅಧಿಕಾರಿಗಳ ವಿರುದ್ಧ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
Advertisement
ಲಾಸ್ ಏಂಜಲೀಸ್‌ನಲ್ಲಿ (Los Angeles) ಹರಡುತ್ತಿರುವ ಕಾಡ್ಗಿಚ್ಚು ಅಧಿಕಾರಿಗಳ ಅಸಮರ್ಥತೆ ತೋರಿಸುತ್ತದೆ. ಇದು ದೇಶದ ಇತಿಹಾಸದಲ್ಲೇ ಅತ್ಯಂತ ಭೀಕರ ದುರಂತಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ. ಈ ಬೆನ್ನಲ್ಲೇ ನಿರ್ಗಮಿತ ಅಧ್ಯಕ್ಷ ಜೋ ಬೈಡನ್ ಪಕ್ಷದ ಸದಸ್ಯರೊಬ್ಬರು, ಲಾಸ್ ಏಂಜಲೀಸ್ ನಗರವನ್ನು 2.0 ಪ್ಲ್ಯಾನ್ ಅಡಿ ಮರು ನಿರ್ಮಾಣ ಮಾಡಲಾಗುವುದು ಎಂದು ಪ್ರತಿಜ್ಞೆ ಮಾಡಿದ್ದಾರೆ.
Advertisement
ಉನ್ನತಮಟ್ಟದ ತನಿಖೆ:
ಕಾಡ್ಗಿಚ್ಚಿಗೆ ಕಾರಣವೇನು ಎಂಬುದನ್ನು ತಿಳಿಯಲು ಎಫ್‌ಬಿಐ ಮತ್ತು ಸ್ಥಳೀಯ ಅಧಿಕಾರಿಗಳ ತಂಡಗಳು ಸೇರಿ ಉನ್ನತ ಮಟ್ಟದ ತನಿಖೆಗೆ ಮುಂದಾಗಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿಮಾಡಿವೆ.
Advertisement
Advertisement
ಪ್ರಮುಖ ಬೆಳವಣಿಗೆಗಳು:
- ಕ್ಯಾಲಿಫೋರ್ನಿಯಾದ ಪಾಲಿಸೇಡ್ಸ್ ಪ್ರದೇಶವೊಂದರಲ್ಲೇ ಸುಟ್ಟು ಭಸ್ಮವಾದ ಭೂಪ್ರದೇಶದ ಪ್ರಮಾಣ 23,600 ಎಕ್ರೆಗೆ ಏರಿಕೆಯಾಗಿದೆ.
- 12,000ಕ್ಕೂ ಹೆಚ್ಚು ಕಟ್ಟಡಗಳು ನಾಶವಾಗಿದೆ. ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದ್ದು, ಶ್ವಾನದಳದ ಮೂಲಕ ಶವಗಳ ಹುಟುಕಾಟ ಕಾರ್ಯನಡೆದಿದೆ. ಜ.7ರಂದು ಹೊತ್ತಿಕೊಂಡ ಕಾಡ್ಗಿಚ್ಚಿನಿಂದ ಈವರೆಗೆ ಅಂದಾಜು 150 ಶತಕೋಟಿ ಡಾಲರ್‌ನಷ್ಟು ಆರ್ಥಿಕ ನಷ್ಟ ಉಂಟಾಗಿದೆ.
- ಬಿಸಿ ಗಾಳಿ, ಫೈರ್ನಾಡೋ (ಅಗ್ನಿ ಜ್ವಾಲೆ)ಗಳು ಮುಗಿಲೆತ್ತರಕ್ಕೆ ಚಿಮ್ಮುತ್ತಿದ್ದು, ವ್ಯಾಪ್ತಿಯನ್ನು ವಿಸ್ತರಿಸುತ್ತಲೇ ಇದೆ. ಅಮೆರಿಕದ ಇತಿಹಾಸದಲ್ಲೇ ಇದು ಕಂಡೂ ಕೇಳರಿಯದ ಕಾಡ್ಗಿಚ್ಚು ಎಂದು ಅಧಿಕಾರಿಗಳು ಬಣ್ಣಿಸಿದ್ದಾರೆ.
- ಈಗಾಗಲೇ 1.53 ಲಕ್ಷ ಮಂದಿಯನ್ನು ಸ್ಥಳಾಂತರಿಸಲು ಆದೇಶ ನೀಡಲಾಗಿದೆ. ಅಲ್ಲದೇ ಇನ್ನೂ 57,000 ಕಟ್ಟಡಗಳು ಅಪಾಯದಲ್ಲಿವೆ. 1.66 ಲಕ್ಷ ಮಂದಿ ಸ್ಥಳಾಂತರಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ತಿಳಿದುಬಂದಿದೆ.
- ಈ ಮಧ್ಯೆ ಕೆನಡಾ ಹಾಗೂ ಮೆಕ್ಸಿಕೋ ದೇಶಗಳು ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು ನಂದಿಸಲು ನೆರವು ಚಾಚಿವೆ..