ಟೆಲ್ ಅವೀವ್: ಇಸ್ರೇಲ್‌ನ (Israel) ಇತಿಹಾಸದಲ್ಲಿ ನಡೆದ ಅತ್ಯಂತ ಭೀಕರ ದಾಳಿಯಲ್ಲಿ ಹಮಾಸ್ (Hamas) ವಶಪಡಿಸಿಕೊಂಡ ಒತ್ತೆಯಾಳುಗಳ ಮೊದಲ ಬ್ಯಾಚ್ ಅನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಗಾಜಾದಲ್ಲಿ ಈಗ ತಾತ್ಕಾಲಿಕ ಕದನ ವಿರಾಮ ಇದೆ.
ಪ್ಯಾಲೆಸ್ಟೀನಿಯನ್ (Palestine) ಬಂಡುಕೋರರ ಗಡಿಯಾಚೆಗಿನ ದಾಳಿಯ ಸಮಯದಲ್ಲಿ ಸೆರೆಹಿಡಿಯಲಾಗಿದ್ದ 13 ಇಸ್ರೇಲಿ ಒತ್ತೆಯಾಳುಗಳು ತಮ್ಮ ನಾಡಿಗೆ ಮರಳಿದರು. ಅವರು ತಮ್ಮ ಕುಟುಂಬಗಳೊಂದಿಗೆ ಮತ್ತೆ ಸೇರುವ ಮೊದಲು ವೈದ್ಯಕೀಯ ತಪಾಸಣೆಗೆ ಒಳಗಾಗುತ್ತಾರೆ ಎಂದು ಸೇನೆ ಹೇಳಿದೆ. ಇದನ್ನೂ ಓದಿ: ಇಸ್ರೇಲ್-ಹಮಾಸ್ ನಡ್ವೆ ಇಂದಿನಿಂದ ಕದನ ವಿರಾಮ – 13 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಸಿದ್ಧತೆ
Advertisement
Advertisement
ಬಿಡುಗಡೆಯಾದವರ ಪೈಕಿ ನಾಲ್ವರು ಮಕ್ಕಳು ಮತ್ತು ಆರು ವೃದ್ಧ ಮಹಿಳೆಯರು ಸೇರಿದ್ದಾರೆ ಎಂದು ಇಸ್ರೇಲ್ ಪ್ರಧಾನಿ ಕಚೇರಿ ಬಿಡುಗಡೆ ಮಾಡಿದ ಪಟ್ಟಿಯು ತಿಳಿಸಿದೆ.
Advertisement
ಹಮಾಸ್ ಒತ್ತೆಯಾಳುಗಳನ್ನು ಮಾನವೀಯ ಸಂಘಟನೆಗೆ ಹಸ್ತಾಂತರಿಸಿದ ನಂತರ ರೆಡ್ ಕ್ರಾಸ್ ವಾಹನಗಳ ಬೆಂಗಾವಲು ಗಾಜಾ ಮತ್ತು ಈಜಿಪ್ಟ್ ನಡುವಿನ ಗಡಿಯನ್ನು ದಾಟುತ್ತಿರುವ ದೃಶ್ಯ ವೈರಲ್ ಆಗಿದೆ. ಈ ವೇಳೆ ಕೆಲವು ಪ್ರಯಾಣಿಕರು ಕೈ ಬೀಸುತ್ತಿರುವ ದೃಶ್ಯವೂ ಇದೆ. ಇದನ್ನೂ ಓದಿ: ನೂಪುರ್ ಶರ್ಮಾ ಬೆಂಬಲಿಸಿದ್ದ ಗೀರ್ಟ್ ವೈಲ್ಡರ್ಸ್‌ಗೆ ಚುನಾವಣೆಯಲ್ಲಿ ಗೆಲುವು – ನೆದರ್ಲೆಂಡ್ಸ್ ಪ್ರಧಾನಿಯಾಗಲು ಸಜ್ಜು
Advertisement
ಕತಾರ್, ಈಜಿಪ್ಟ್ ಮತ್ತು ಯುನೈಟೆಡ್ ಸ್ಟೇಟ್ಸ್ ಜೊತೆಗೂಡಿ ಮಾತುಕತೆಯ ನಂತರದ ಒಪ್ಪಂದದ ಅಡಿಯಲ್ಲಿ ಇಸ್ರೇಲ್ ವಶಪಡಿಸಿಕೊಂಡಿದ್ದ ಪ್ಯಾಲೆಸ್ಟೀನಿಯನ್ ಕೈದಿಗಳು, ಮಹಿಳೆಯರು ಮತ್ತು ಹದಿಹರೆಯದ ಹುಡುಗರನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ.
ಹಮಾಸ್ ಶುಕ್ರವಾರ ಒಟ್ಟು 24 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ. ಇಸ್ರೇಲ್ ತನ್ನ ಜೈಲುಗಳಿಂದ 39 ಮಹಿಳೆಯರು ಮತ್ತು ಮಕ್ಕಳನ್ನು ಬಿಡುಗಡೆ ಮಾಡಿದೆ ಎಂದು ಪ್ರಮುಖ ಮಧ್ಯವರ್ತಿ ಕತಾರ್ ದೃಢಪಡಿಸಿದೆ.