ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ (Covid-19) ಆರ್ಭಟ ಹೆಚ್ಚಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 24 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಆ ಮೂಲಕ ಸೋಂಕಿತರ ಸಂಖ್ಯೆ ಶತಕ ದಾಟಿದೆ.
ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 105 ಕ್ಕೆ ಏರಿದೆ. ಇದುವರೆಗೆ 11 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಮಾಸ್ಕ್ ಕಡ್ಡಾಯ ಇಲ್ಲ: ಸಿದ್ದರಾಮಯ್ಯ
Advertisement
Advertisement
ಇಂದು ಇಬ್ಬರನ್ನು ಐಸಿಯುಗೆ ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ 23 ಹಾಗೂ ದಕ್ಷಿಣ ಕನ್ನಡ ಜಿಲ್ಲೆ 1 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.
Advertisement
ಕೆಲಕಾಲ ವಿರಾಮದ ನಂತರ ಕೊರೊನಾ ವೈರಸ್‌ನ ಹೊಸ ಉಪತಳಿ ಜೆಎನ್.1 ಕಾಲಿಟ್ಟಿದೆ. ಭಾರತದಲ್ಲೂ ಹೊಸ ತಳಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅಗತ್ಯ ಕ್ರಮಗಳನ್ನು ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದನ್ನೂ ಓದಿ: 4 ತಿಂಗಳು, 120 ದಿನ ಬರೀ ಅರಿಶಿಣ ನೀರು, ನಿಂಬೆ ರಸ- ಗೃಹಬಂಧನದಲ್ಲಿದ್ದ ಯುವತಿ ರಕ್ಷಣೆ
Advertisement
ರಾಜ್ಯದಲ್ಲಿ ಜೆಎನ್.1 ಉಪತಳಿ ಹರಡುವ ಭೀತಿಯಿದ್ದು, 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆಯಿಂದ ಇರುವಂತೆ ಜನರಿಗೆ ರಾಜ್ಯ ಸರ್ಕಾರ ಸೂಚಿಸಿದೆ.