– ಬಿಡುಗಡೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭಾಗಿ
ಬೆಂಗಳೂರು: ಸನ್ನಡತೆ ಆಧಾರದ ಮೇಲೆ ಪರಪ್ಪನ ಅಗ್ರಹಾರ (Parappana Agrahara) ಸೇರಿದಂತೆ ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ (Central Prison) 24 ಕೈದಿಗಳನ್ನು (Prisoners) ಬಿಡುಗಡೆ ಮಾಡಲಾಗಿದೆ.
ಬಿಡುಗಡೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭಾಗಿಯಾಗಿದ್ದಾರೆ. ಕಾರಾಗೃಹ ಎಡಿಜಿಪಿ ಅಲೋಕ್ ಕುಮಾರ್, ಜೈಲ್ ಚೀಫ್ ಸೂಪರ್‌ಡೆಂಟ್ ಅಂಶು ಕುಮಾರ್ ಸೇರಿದಂತೆ ಕಾರಾಗೃಹ ಇಲಾಖಾ ಅಧಿಕಾರಿ ವರ್ಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಚಿಕ್ಕಮಗಳೂರು | ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್ ಪ್ರೇಮಿ
ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆಗೆ ರಾಜ್ಯಪಾಲರು ಆದೇಶಿಸಿದ್ದಾರೆ. ಇದರಿಂದ ಜೀವಾವಧಿ ಸಜಾ ಬಂಧಿಗಳಿಗೆ ಬಿಡುಗಡೆ ಭಾಗ್ಯ ದೊರೆತಿದೆ. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 24 ಕೈದಿಗಳು ಬಿಡುಗಡೆಗೊಂಡಿದ್ದಾರೆ. ಅಪರಾಧ ಕೃತ್ಯ ಎಸಗಿ ಜೈಲು ಸೇರಿದ್ದ ಕೈದಿಗಳು ಮನಪರಿವರ್ತನೆ ಆಗಿ ಒಳ್ಳೆಯ ಮನಷ್ಯರಾಗಿ ಬದಲಾದ ಹಿನ್ನೆಲೆ ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆಗೊಂಡಿದ್ದಾರೆ. ಇದನ್ನೂ ಓದಿ: ಲಷ್ಕರ್, ಜೈಶ್ ನಂಟಿದ್ದ 23 ವ್ಯಕ್ತಿಗಳನ್ನ ಉಗ್ರರು ಎಂದು ಘೋಷಿಸಿದ ಕೇಂದ್ರ
