ಮಂಗಳೂರು: ಉಪ್ಪಿನಂಗಡಿ ಕಾಲೇಜಿನಲ್ಲಿ ಹಿಜಬ್ ವಿವಾದ ಮುಗಿಯುವಂತೆ ತೋರುತ್ತಿಲ್ಲ. ಪ್ರಾಂಶುಪಾಲರ ಕಟ್ಟುನಿಟ್ಟಿನ ಸೂಚನೆ ಹೊರತಾಗಿಯೂ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹಲವು ವಿದ್ಯಾರ್ಥಿನಿಯರು ಹಿಜಬ್ ಧರಿಸಿಕೊಂಡೇ ಬಂದಿದ್ದಾರೆ.
ಕಳೆದ ಹಲವು ದಿನಗಳಿಂದ ಹಿಜಬ್ ವಿವಾದದಲ್ಲಿ ಸುದ್ದಿಯಾಗಿದ್ದ ಕಾಲೇಜು ಅಭಿವೃದ್ಧಿ ನಿರ್ಣಯದಂತೆ, ಹಿಜಬ್‌ಗೆ ಪಟ್ಟು ಹಿಡಿದು ಕುಳಿತ 24 ವಿದ್ಯಾರ್ಥಿನಿಯರಿಗೆ 1 ವಾರ ತರಗತಿಗೆ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಕೈ ಬಿಡೋಲ್ಲ: ಬಿ.ಸಿ.ನಾಗೇಶ್
ರಾಜ್ಯ ಹೈಕೋರ್ಟ್ ತೀರ್ಪು ಹಾಗೂ ಸರ್ಕಾರದ ಸುತ್ತೊಲೆಯ ಹಿನ್ನೆಲೆ 24 ವಿದ್ಯಾರ್ಥಿನಿಯರಿಗೆ 1 ವಾರ ತರಗತಿಗೆ ನಿರ್ಬಂಧಿಸಲಾಗಿದೆ.
ಕೆಲ ದಿನಗಳ ಹಿಂದೆ 7 ವಿದ್ಯಾರ್ಥಿನಿಯರು ಅಮಾನತಾಗಿದ್ದರು. ಹಿಜಬ್ ವಿಚಾರವಾಗಿ ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಕೆಲ ವಿದ್ಯಾರ್ಥಿನಿಯರು ಹಲ್ಲೆ ಮಾಡಿದ್ದರು. ಟಿವಿ ವರದಿಗಾರರು ಸೇರಿದಂತೆ ಮೂವರ ಮೇಲೆ ವಿದ್ಯಾರ್ಥಿನಿಯರು ದೂರು ನೀಡಿದ್ದು, ಈ ಹಿನ್ನೆಲೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನೂ ಓದಿ: ಈದ್ಗಾ ಮೈದಾನ ವಿವಾದ- ಇಕ್ಕಟ್ಟಿಗೆ ಸಿಲುಕಿದ ಚಾಮರಾಜಪೇಟೆ ಪೊಲೀಸರು