-ಆಶ್ರಯ ನೀಡಿದ್ದ ಗೆಳೆಯನು ರೇಪ್ ಮಾಡ್ದ
ಚಂಡೀಗಢ: 24 ವರ್ಷದ ಯುವತಿ ಮೇಲೆ ಆಕೆಯ ಸ್ನೇಹಿತ ಸೇರಿದಂತೆ ಒಂದೇ ದಿನ ಹತ್ತು ಮಂದಿ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಪಂಜಾಬ್ ನಲ್ಲಿ ನಡೆದಿದೆ.
ಈ ಘಟನೆ ಅಕ್ಟೋಬರ್ 10 ರಂದು ಪಂಜಾಬ್ ನ ಕಪುರ್ಥಾಲಾ ಜಿಲ್ಲೆಯ ಲಖನ್ಪುರ್ ಖೊಲೆ ಮತ್ತು ದಯಾಲ್ಪುರ್ ಗ್ರಾಮಗಳಲ್ಲಿ ಎರಡು ಕಡೆ ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಕುರಿತಂತೆ ನಾವು ಸಾಮೂಹಿಕ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದೇವೆ. 10 ಮಂದಿ ಆರೋಪಿಗಳಲ್ಲಿ ನಾಲ್ವರನ್ನು ಬಂಧಿಸಿದ್ದೇವೆ. ಉಳಿದವರು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ತಂಡಗಳನ್ನು ರಚಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿ ಸತ್ನಾಮ್ ಸಿಂಗ್ ತಿಳಿಸಿದ್ದಾರೆ.
Advertisement
Advertisement
ಏನಿದು ಪ್ರಕರಣ
5 ತಿಂಗಳ ಹಿಂದೆ ಸಂತ್ರಸ್ತೆ ಭೋಲು ಎಂಬ ವ್ಯಕ್ತಿಯನ್ನು ಭೇಟಿಯಾಗಿದ್ದಾರೆ. ಆತ ಡ್ರಗ್ ವ್ಯಸನಿಯಾಗಿದ್ದನು ಎಂದು ದೂರಿನಲ್ಲಿ ತಿಳಿಸಿದ್ದಾರೆ. ದಿನಕಳೆದಂತೆ ಆಕೆಯೂ ಡ್ರಗ್ ತೆಗೆದುಕೊಳ್ಳಲು ಪ್ರಾರಂಭಿಸಿದ್ದರು. ಭೋಲು ಸೋನು ಎಂಬಾತನ್ನು ಪರಿಚಯಿಸಿದ್ದಾನೆ. ಆತ ಸಂತ್ರಸ್ತೆಯನ್ನು ಪ್ರತಿದಿನ ಭೇಟಿ ಮಾಡಲು ಪ್ರಾರಂಭಿಸಿದ್ದನು. ಸೋನು ಸ್ನೇಹಿತ ಸಿರಿಯಿಂದ ಸಂತ್ರಸ್ತೆ ಬಾಡಿಗೆಗೆ ಮನೆ ತೆಗೆದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಅಕ್ಟೋಬರ್ 10 ರಂದು ಸಿರಿ ತನ್ನ ಹುಟ್ಟುಹಬ್ಬದ ಆಚರಣೆಗಾಗಿ ತನ್ನ ಸ್ನೇಹಿತರನ್ನು ಆಹ್ವಾನಿಸಿದ್ದನು. ಅಂದಿನ ದಿನವೇ ಸಂತ್ರಸ್ತೆಯನ್ನು ಸಮೀಪದ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಆರು ಮಂದಿ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಕಾಮುಕರು ಅತ್ಯಾಚಾರ ಮಾಡುವಾಗ ಸಂತ್ರಸ್ತೆಯ ಕೂಗಿನ ಶಬ್ದ ಯಾರಿಗೂ ಕೇಳಬಾರದು ಎಂದು ಜೋರಾಗಿ ಮ್ಯೂಜಿಕ್ ಹಾಕಿದ್ದರು ಎಂದು ಪೊಲೀಸರು ಹೇಳಿದ್ದಾರೆ.
Advertisement
ನಂತರ ಸಂತ್ರಸ್ತೆ ಅಲ್ಲಿಂದ ತಪ್ಪಿಸಿಕೊಂಡು ದಯಾಲ್ಪುರ್ ಗ್ರಾಮದಲ್ಲಿ ತನ್ನ ಪರಿಚಯಸ್ಥನಾದ ಸತ್ಪಾಲ್ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಆದರೆ ಅದೇ ದಿನ ಸತ್ಪಾಲ್ ಸ್ನೇಹಿತೆ ಎಂದು ನೋಡದೇ ತನ್ನ ಮೂವರು ಸ್ನೇಹಿತರಾದ ಸುಖ್ವಿಂದರ್ ಸಿಂಗ್, ರವೀಂದರ್ ಸಿಂಗ್ ಮತ್ತು ಕುಲ್ವಿಂದರ್ ಸಿಂಗ್ ಜೊತೆ ಸೇರಿ ಸಂತ್ರಸ್ತೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಇವರೆಲ್ಲರೂ ಸ್ಥಳೀಯ ಕೈಗಾರಿಕಾ ಘಟಕದ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಸಂತ್ರಸ್ತೆ ಅಕ್ಟೋಬರ್ 11ರಂದು ಬೆಳಗ್ಗೆ ತನ್ನ ಬಾಡಿಗೆ ಮನೆಗೆ ಬಂದಿದ್ದಾರೆ. ಅಲ್ಲಿ ನಡೆದ ಘಟನೆಯ ಬಗ್ಗೆ ಆರೋಪಿ ಹಿರಿಯ ಅಜ್ಜಿ ಮತ್ತು ಚಿಕ್ಕಮ್ಮನ ಬಳಿ ಹೇಳಿಕೊಂಡಿದ್ದಾರೆ. ಆದರೆ ಸಂತ್ರಸ್ತೆಗೆ ಸಹಾಯ ಮಾಡುವ ಬದಲು ಆಕೆಯ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರ ಹಾಕಿದ್ದಾರೆ. ಕೊನೆಗೆ ನೊಂದ ಸಂತ್ರಸ್ತೆ ಸುಭಾನ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಂತ್ರಸ್ತೆಯನ್ನು ಸ್ಥಳೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ದೃಢವಾಗಿದೆ. ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾವು 10 ಮಂದಿ ಆರೋಪಿಗಳಲ್ಲಿ ನಾಲ್ವರನ್ನು ಬಂಧಿಸಿದ್ದು, ಉಳಿದವರಿಗಾಗಿ ಬಲೆ ಬೀಸಿದ್ದೇವೆ ಎಂದು ಸತ್ನಾಮ್ ಸಿಂಗ್ ಅವರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv