ಲಕ್ನೋ: ಇಸ್ಲಾಂ ಧರ್ಮಕ್ಕೆ (Islam Religion) ಮತಾಂತರಗೊಂಡು ಮದುವೆಯಾಗಲು ನಿರಾಕರಿಸಿ ಯುವತಿಯೊಬ್ಬಳು ಆತ್ಮಹತ್ಯೆಗೆ (Suicide) ಶರಣಾಗಿದ್ದು, ಆರೋಪಿಯನ್ನು ಉತ್ತರಪ್ರದೇಶ (Uttar Pradesh) ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಶಾರುಖ್ (24) ಎಂದು ಗುರುತಿಸಲಾಗಿದೆ. ಆರೋಪಿ ಆತ್ಮಹತ್ಯೆಗೆ ಶರಣಾದ ಯುವತಿಯೊಂದಿಗೆ ಸಂಬಂಧ ಹೊಂದಿದ್ದು, ಸಾಮಾಜಿಕ ಅವಮಾನದಿಂದ ತಪ್ಪಿಸಿಕೊಳ್ಳಲು ಆಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ (Conversion) ಪೀಡಿಸುತ್ತಿದ್ದ. ಅಷ್ಟೇ ಅಲ್ಲದೇ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳದೇ ಹೋದರೆ ಸಾಯಬೇಕು ಎಂದು ಷರತ್ತನ್ನೂ ವಿಧಿಸಿದ್ದ. ಇದರಿಂದ ಬೇಸತ್ತ ಯುವತಿ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಮುಂಬೈ-ಪುಣೆ ಹೆದ್ದಾರಿಯಲ್ಲಿ ಪ್ರಪಾತಕ್ಕೆ ಉರುಳಿದ ಬಸ್; 12 ಸಾವು
Advertisement
Advertisement
24 ವರ್ಷದ ಮೃತ ಯುವತಿ ಕೆಲವು ವರ್ಷಗಳ ಹಿಂದೆ ಸಾಮಾಜಿಕ ಜಾಲತಾಣದ (Social Media) ಮೂಲಕ ಆರೋಪಿಯ ಸಂಪರ್ಕಕ್ಕೆ ಬಂದಿದ್ದು, ಆರೋಪಿ ತನ್ನನ್ನು ಸೌರಭ್ ಎಂದು ಗುರುತಿಸಿಕೊಂಡಿದ್ದ. ಈ ಆರೋಪದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಇದನ್ನೂ ಓದಿ: ಬಾಲಕನನ್ನು ಥಳಿಸಿ, ಬೆತ್ತಲಾಗಿಸಿ ಧಾರ್ಮಿಕ ಘೋಷಣೆ ಕೂಗುವಂತೆ ಅಪ್ರಾಪ್ತರಿಂದಲೇ ಒತ್ತಾಯ
Advertisement
ಮೃತ ಯುವತಿಯ ತಂದೆ ತನ್ನ ಮಗಳಿಗೆ ಆರೋಪಿ ಕಿರುಕುಳ ನೀಡುತ್ತಿದ್ದ ಮತ್ತು ಇಸ್ಲಾಮಿಕ್ ಸಂಪ್ರದಾಯದಂತೆ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಎಂದು ಶುಕ್ರವಾರ ದೂರು ನೀಡಿದ್ದು ಎಫ್‌ಐಆರ್ (FIR) ದಾಖಲಾಗಿದೆ. ಅಲ್ಲದೇ ಆರೋಪಿ ತನ್ನ ಮಗಳ ಖಾಸಗಿ ಫೋಟೋಗಳು ಮತ್ತು ವೀಡಿಯೋಗಳನ್ನು ಸಹ ಹೊಂದಿದ್ದು, ಇಸ್ಲಾಂ ಧರ್ಮವನ್ನು ಸ್ವೀಕರಿಸಿ ಮದುವೆಯಾಗುವಂತೆ ಬೆದರಿಕೆ ಹಾಕಿದ್ದಾನೆ ಎಂದು ಎಸಿಪಿ ಬಳಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಇಬ್ಬರು ಭದ್ರತಾ ಸಿಬ್ಬಂದಿಗೆ ಗುಂಡಿಕ್ಕಿ ಬ್ಯಾಂಕ್‍ನಲ್ಲಿ 13.28 ಲಕ್ಷ ಲೂಟಿ
Advertisement
ಆರೋಪಿ ವಿರುದ್ಧ ಐಪಿಸಿ (IPC) ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು ಯುಪಿ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ 2021ರ ಸೆಕ್ಷನ್ 3 ಮತ್ತು 5 (I) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಆತನನ್ನು ಕೋರ್ಟಿಗೆ (Court) ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಎಸಿಪಿ ತಿಳಿಸಿದ್ದಾರೆ. ಇದನ್ನೂ ಓದಿ: ವರನಿಗೆ ಅಶ್ಲೀಲ ಫೋಟೋ ಕಳಿಸಿ ಮದುವೆ ನಿಲ್ಲಿಸಿದ ವಧುವಿನ ಮಾಜಿ ಪ್ರಿಯತಮ!