– ಚುನಾವಣಾ ಆಯೋಗದ ವಿರುದ್ಧ ಬಾಯಿಗೆ ಬಂದಂತೆ ಹೇಳಿಕೆ
– ಕೋಮು ನೆಲೆಯಲ್ಲಿ ಮತ ಕೇಳಿದ್ದ ಮಮತಾ
ನವದೆಹಲಿ: ಕೂಚ್ಬಿಹಾರ್ ಜಿಲ್ಲೆಯ ಸಿತಾಲ್ಕುಚಿಯಲ್ಲಿನ ಮತದಾನದ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ವಿರುದ್ಧ ಬಾಯಿಗೆ ಬಂದಂತೆ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಭಾರೀ ಹಿನ್ನಡೆಯಾಗಿದೆ. ಚುನಾವಣಾ ಆಯೋಗ 24 ಗಂಟೆಗಳ ಕಾಲ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗದಂತೆ ಮಮತಾ ಬ್ಯಾನರ್ಜಿಗೆ ನಿರ್ಬಂಧ ಹೇರಿದೆ.
ಈ ಹಿಂದೆ ಅಲ್ಪಸಂಖ್ಯಾತರ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಚುನಾವಣಾ ಆಯೋಗ ಕಾರಣ ಕೇಳಿ 2 ನೋಟಿಸ್ ಜಾರಿ ಮಾಡಿತ್ತು. ಇದಾದ ಬಳಿಕವೂ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗ ಮತ್ತು ಸಿಐಎಸ್ಎಫ್ ವಿರುದ್ಧ ಹೇಳಿಕೆ ನೀಡಿದ್ದರು. ನಿರಂತರವಾಗಿ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಯಿಂದ ನಾಳೆ ರಾತ್ರಿ 8 ಗಂಟೆಯವರೆಗೆ ಪ್ರಚಾರಕ್ಕೆ ನಿರ್ಬಂಧ ಹೇರಿ ಆದೇಶ ಪ್ರಕಟಿಸಿದೆ.
Advertisement
EC should rename MCC as Modi Code of Conduct!
BJP can use all its might but NOTHING in this world can stop me from being with my people & sharing their pain.
They can restrict me from visiting my brothers & sisters in Cooch Behar for 3 days but I WILL be there on the 4th day!
— Mamata Banerjee (@MamataOfficial) April 11, 2021
Advertisement
ನಿರ್ಬಂಧ ಯಾಕೆ?
ಕೂಚ್ಬಿಹಾರ್ ಜಿಲ್ಲೆಯ ಸಿತಾಲ್ಕುಚಿಯಲ್ಲಿನ ಮತದಾನದ ವೇಳೆ ನಡೆದ ಹಿಂಸಾಚಾರದಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಐವರು ಬಲಿಯಾಗಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅಣತಿಯಂತೆ ಈ ಹಿಂಸಾಚಾರ ನಡೆದಿದ್ದು, ಭದ್ರತಾ ಪಡೆಗಳು ಅಮಿತ್ ಶಾ ನಿರ್ದೇಶನದಂತೆ ಕೆಲಸ ಮಾಡುತ್ತಿದೆ. ಅಮಿತ್ ಶಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಮಮತಾ ಆಗ್ರಹಿಸಿದ್ದರು.
Advertisement
ಘಟನೆ ದಿನವೇ ಚುನಾವಣಾ ಆಯೋಗ ಪೊಲೀಸ್ ಹಾಗೂ ಚುನಾವಣಾ ಅಧಿಕಾರಿಗಳಿಂದ ವರದಿ ತರಿಸಿಕೊಂಡಿತ್ತು. ದುಷ್ಕರ್ಮಿಗಳು ಭದ್ರತಾ ಪಡೆಗಳಿಂದ ಶಸ್ತಾಸ್ತ್ರ ಕಸಿಯಲು ಬಂದಾಗ ಅನಿವಾರ್ಯವಾಗಿ ಪ್ರಾಣ ರಕ್ಷಣೆಗಾಗಿ ಗುಂಡಿನ ದಾಳಿ ನಡೆಸಲಾಗಿದೆ. ಇದರ ಹಿಂದೆ ಯಾವುದೇ ಪಿತೂರಿ ಇಲ್ಲ ಎಂದು ವರದಿಯಲ್ಲಿ ತಿಳಿಸಲಾಗಿತ್ತು.
Advertisement
The blatant misuse of Central forces continues unabated. Despite us repeatedly raising this issue, @ECISVEEP continues to be a mute spectator while men in uniform are being misused at several places to openly intimidate TMC voters & influence many to vote in favour of one party. pic.twitter.com/l6t28mxwBO
— Mamata Banerjee (@MamataOfficial) April 6, 2021
ಸಿಐಎಸ್ಎಫ್ ನಿರ್ದೇಶಕ ಕುಲದ್ದೀಪ್ ಸಿಂಗ್ ಪ್ರತಿಕ್ರಿಯಿಸಿ, ಚುನಾವಣಾ ಆಯೋಗದ ನಿರ್ದೇಶನದಂತೆ ಸಿಆರ್ಪಿಎಫ್ ಕೆಲಸ ಮಾಡುತ್ತದೆ. ರಾಜಕೀಯ ಪಕ್ಷಗಳ ಆರೋಪಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರದಲ್ಲಿ ಯಾರಿಗೂ ಅನುಮಾನ ಬೇಡ ಎಂದು ತಿಳಿಸಿದ್ದರು.
ಕೂಚ್ಬಿಹಾರ್ ಸ್ಥಳಕ್ಕೆ ಯಾವುಬ್ಬ ರಾಜಕೀಯ ವ್ಯಕ್ತಿ ತೆರಳದಂತೆ ಚುನಾವಣಾ ಆಯೋಗ ನಿರ್ಬಂಧ ಹೇರಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗದ ಎಂಸಿಸಿ ಮೋಡಿ ಕೋಡ್ ಆಫ್ ಕಂಡಕ್ಟ್ ಎಂದು ಬದಲಾಗಬೇಕು ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಹಿಂದೆ ಮುಸ್ಲಿಮ್ ಮತದಾರರು ವಿವಿಧ ರಾಜಕೀಯ ಪಕ್ಷಗಳಿಗೆ ಮತವನ್ನು ಹಾಕಿ ವಿಭಜನೆ ಮಾಡದೇ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ಹಾಕಬೇಕು ಎಂದು ಮನವಿ ಮಾಡಿದ್ದರು. ಚುನಾವಣಾ ಸಮಯದಲ್ಲಿ ಕೋಮು ನೆಲೆಯಲ್ಲಿ ಮತ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದಾದ ಬಳಿಕ ಆಯೋಗ ಮಮತಾಗೆ ನೋಟಿಸ್ ನೀಡಿತ್ತು.