ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟಿವ್ ಕೇಸ್ಗಳ ಸಂಖ್ಯೆ 241ಕ್ಕೆ ಏರಿಕೆ ಕಂಡಿದ್ದು, ಜೊತೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ 2,041ಕ್ಕೆ ಏರಿಕೆ ಕಂಡಿದೆ.
ನಿನ್ನೆ 196 ಒಟ್ಟು ಪ್ರಕರಣ ಪತ್ತೆಯಾಗಿತ್ತು ಇಂದು 45 ಪ್ರಕರಣ ಏರಿಕೆ ಕಂಡು 241ಕ್ಕೆ ತಲುಪಿದೆ. ಈ ಪೈಕಿ ಬೆಂಗಳೂರಿನಲ್ಲಿ 232 ಪಾಸಿಟಿವ್ ಪ್ರಕರಣ ವರದಿಯಾಗಿದೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ನಿನ್ನೆ 1,898 ಇತ್ತು ಇಂದು 2,041ಕ್ಕೆ ತಲುಪಿದೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಜಗ್ಗೇಶ್, ನಿರ್ಮಲಾ ಸೀತಾರಾಮನ್ಗೆ ಸಿಕ್ತು ಬಿಜೆಪಿ ಟಿಕೆಟ್
ಬೆಂಗಳೂರು ಹೊರತು ಪಡಿಸಿ ಉಳಿದಂತೆ 3 ಜಿಲ್ಲೆಗಳಲ್ಲಿ 9 ಕೇಸ್ ಮತ್ತು 26 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 98 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 1.29 ದಾಖಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 40,064 ಮರಣ ಪ್ರಕರಣ ಪತ್ತೆಯಾಗಿದೆ. ಕೆಲದಿನಗಳಿಂದ ಮರಣ ಪ್ರಕರಣ ಸ್ಥಿರವಾಗಿದೆ. ಇದನ್ನೂ ಓದಿ: ಗಾಂಧಿ ಹತ್ಯೆಯನ್ನು ಸಂಭ್ರಮಿಸುವ RSS ದೇಶಪ್ರೇಮಿ ಸಂಘಟನೆಯಲ್ಲ: ಕಾಂಗ್ರೆಸ್
ಈವರೆಗೆ ರಾಜ್ಯದಲ್ಲಿ ಒಟ್ಟು 39,51,739 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,09,592 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 7,298 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 18,579 ಸ್ಯಾಂಪಲ್ (ಆರ್ಟಿಪಿಸಿಆರ್ 14,053 + 4,526 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 232, ದಕ್ಷಿಣ ಕನ್ನಡ 4, ತುಮಕೂರು 3 ಮತ್ತು ಬೆಳಗಾವಿಯಲ್ಲಿ 2 ಪ್ರಕರಣ ಸೇರಿ ಒಟ್ಟು 241 ಕೇಸ್ ವರದಿಯಾಗಿದೆ.