ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 245 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ಒಟ್ಟು 3 ಮಂದಿ ಸಾವನ್ನಪ್ಪಿದ್ದಾರೆ. ಈ ಮೂರು ಸಾವು ಕೂಡ ಬೆಂಗಳೂರಿನಲ್ಲಿ ದಾಖಲಾಗಿದ್ದು, ಉಳಿದ 29 ಜಿಲ್ಲೆಗಳಲ್ಲಿ ಶೂನ್ಯ ಮರಣ ಪ್ರಕರಣ ದಾಖಲಾಗಿದೆ.
ಬೆಂಗಳೂರು ನಗರದಲ್ಲಿ 154 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 160 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 3 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ 206 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,036 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,91,614 ಮಂದಿಗೆ ಕೊರೊನಾ ಬಂದಿದೆ. 29,45,415 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.22 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.24 ರಷ್ಟಿದೆ. ಇದನ್ನೂ ಓದಿ: ಕೋವಿಡ್ ಲಸಿಕೆಯ 2ನೇ ಡೋಸ್ ಪಡೆಯಲು ಜನರ ಹಿಂದೇಟು- ವ್ಯಾಕ್ಸಿನ್ ವಿತರಣೆಗೆ ಹೊಸ ಯೋಜನೆ
ಇಂದು ರಾಜ್ಯದಲ್ಲಿ ಒಟ್ಟು 1,17,590 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,01,119 ಸ್ಯಾಂಪಲ್ (ಆರ್ಟಿಪಿಸಿಆರ್ 82,979 + 18,140 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ನನ್ನ ಜೀವನದಲ್ಲಿ ಒಂದು ತಪ್ಪು ನಡೆದಿದೆ ಅದನ್ನೇ ಇಟ್ಟುಕೊಂಡು ಪದೇ ಪದೇ ಟಾರ್ಗೆಟ್ ಮಾಡಬೇಡಿ: ನಲಪಾಡ್
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 154, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 3, ಚಿತ್ರದುರ್ಗ 0, ದಕ್ಷಿಣ ಕನ್ನಡ 12, ದಾವಣಗೆರೆ 0, ಧಾರವಾಡ 5, ಗದಗ 0, ಹಾಸನ 2, ಹಾವೇರಿ 0, ಕಲಬುರಗಿ 2, ಕೊಡಗು 3, ಕೋಲಾರ 3, ಕೊಪ್ಪಳ 0, ಮಂಡ್ಯ 3, ಮೈಸೂರು 13, ರಾಯಚೂರು 0, ರಾಮನಗರ 1, ಶಿವಮೊಗ್ಗ 5, ತುಮಕೂರು 8, ಉಡುಪಿ 6, ಉತ್ತರ ಕನ್ನಡ 13, ವಿಜಯಪುರ 1, ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಚಿತಾ ರಾಮ್ ಫಸ್ಟ್ ನೈಟ್ ಹೇಳಿಕೆಗೆ ಆಕ್ಷೇಪ: ಕ್ಷಮೆ ಕೇಳಲು ಆಗ್ರಹ