ಬೆಂಗಳೂರು: ರಾಜ್ಯದಲ್ಲಿ ಕೆಲದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಕಾಣುತ್ತಿದೆ. ಇಂದು ನಿನ್ನೆಗಿಂತ ಹೆಚ್ಚು ಪಾಸಿಟಿವ್ ಪ್ರಕರಣ ವರದಿಯಾಗಿದೆ. 247 ಹೊಸ ಕೊರೊನಾ ಪ್ರಕರಣ ವರದಿಯಾಗಿದ್ದು, 1 ಮರಣ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ದಾಖಲಾಗಿರುವ ಏಕೈಕ ಸಾವು ಬೆಂಗಳೂರು ನಗರದಲ್ಲಿ ವರದಿಯಾಗಿದೆ. ಬೆಂಗಳೂರು ನಗರದಲ್ಲಿ 134 ಮಂದಿಗೆ ಪಾಸಿಟಿವ್ ವರದಿ ಬಂದಿದ್ದು, ರಾಜ್ಯದಲ್ಲಿ 278 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,064 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,93,599 ಮಂದಿಗೆ ಕೊರೊನಾ ಬಂದಿದೆ. 29,48,331 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.40 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.31 ರಷ್ಟಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಭಾಷಣದಲ್ಲಿಂದು ಪೂರ್ತಿ ಮೋದಿ ‘ಜೀ’ ಮಯ
ಇಂದು ರಾಜ್ಯದಲ್ಲಿ ಒಟ್ಟು 54,348 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 78,037 ಸ್ಯಾಂಪಲ್ (ಆರ್ಟಿ ಪಿಸಿಆರ್ 62,699 + 15,338 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ರೈತರು ಸ್ಮಾರ್ಟ್ಫೋನ್ ಕೊಳ್ಳಲು 1500 ರೂ. ಆರ್ಥಿಕ ನೆರವು ಕೊಟ್ಟ ಸರ್ಕಾರ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 134, ಬೀದರ್ 0, ಚಾಮರಾಜನಗರ 3, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 5, ಚಿತ್ರದುರ್ಗ 1, ದಕ್ಷಿಣ ಕನ್ನಡ 10, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 6, ಹಾವೇರಿ 0, ಕಲಬುರಗಿ 1, ಕೊಡಗು 6, ಕೋಲಾರ 3, ಕೊಪ್ಪಳ 0, ಮಂಡ್ಯ 2, ಮೈಸೂರು 48, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 10, ಉಡುಪಿ 5, ಉತ್ತರ ಕನ್ನಡ 6, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.