ಮಸ್ಕಿ: ಕಾಂಗ್ರೆಸ್‍ನ ಬಸನಗೌಡ ತುರ್ವಿಹಾಳ ಅವರು ಬಿಜೆಪಿಯ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರನ್ನು 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ.
ಆರಂಭದಿಂದಲೂ ಮುನ್ನಡೆ ಉಳಿಸಿಕೊಂಡು ಬಂದಿದ್ದ ಅವರು ವಿಜಯಿಯಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಚುನಾವಣಾ ಮತ ಎಣಿಕೆಯ ಹಲವು ಸುತ್ತುಗಳು ಬಾಕಿ ಇರುವಾಗಲೇ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಸೋಲು ಒಪ್ಪಿಕೊಂಡಿದ್ದರು. ಅದರಂತೆ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ನಗೆಯನ್ನು ಬೀರಿದ್ದಾರೆ.2018ರ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲ್ ಅವರು 60,387 ಮತಗಳನ್ನು ಪಡೆದಿದ್ದರೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸನಗೌಡ ತುರ್ವಿಹಾಳ ಅವರಿಗೆ 60,174 ಮತಗಳು ಬಿದ್ದಿತ್ತು. 213 ಮತಗಳ ಅಂತರದಿಂದ ಪ್ರತಾಪ್ ಗೌಡ ಪಾಟೀಲ್ ಗೆದ್ದಿದ್ದರು. ನಂತರ ನಡೆದ ಆಪರೇಷನ್ ಕಮಲದಲ್ಲಿ ಅವರು ಕಾಂಗ್ರೆಸ್ ತೊರೆದು ಬಿಜೆಪಿಯನ್ನು ಸೇರಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸನಗೌಡ ಕಾಂಗ್ರೆಸ್ ಸೇರಿದ್ದರು.