ಡೆಹ್ರಾಡೊನ್: ಮದುವೆ (Wedding) ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ (Bus) ಅಪಘಾತಗೊಂಡು 25 ಮಂದಿ ಸಾವನ್ನಪ್ಪಿ, 21ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ (Uttarakhand) ಪೌರಿ ಗರ್ವಾಲ್‍ನಲ್ಲಿ (Pauri Garhwal) ನಡೆದಿದೆ.
Advertisement
ಮಂಗಳವಾರ ತಡರಾತ್ರಿ ಪೌರಿ ಗರ್ವಾಲ್‍ನಲ್ಲಿ ಕಂದಕಕ್ಕೆ ಉರುಳಿ ಬಸ್ ಅಪಘಾತಗೊಂಡಿದೆ. ಅಪಘಾತದಲ್ಲಿ 25 ಮಂದಿ ಮೃತಪಟ್ಟಿದ್ದು, ಈಗಾಗಲೇ 21 ಮಂದಿಯನ್ನು ರಾಜ್ಯ ವಿಪತ್ತು ನಿರ್ವಹಣಾ ತಂಡ (SDRF) ರಕ್ಷಣೆ ಮಾಡಿದೆ ಎಂದು ಪೊಲೀಸ್ (Police) ನಿರ್ದೇಶಕರಾದ ಅಶೋಕ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಹಿಮಪಾತ – 20 ಮಂದಿ ನಾಪತ್ತೆ
Advertisement
Advertisement
ಈ ಬಗ್ಗೆ ರಾಜ್ಯ ಪೊಲೀಸ್ ತಂಡ ರಕ್ಷಣಾ ಕಾರ್ಯಚರಣೆಯ ವೀಡಿಯೋ ಬಿಡುಗಡೆ ಮಾಡಿದೆ. ಅಪಘಾತದಿಂದ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದುರಂತದಲ್ಲಿ ಸಾವಿಗೀಡಾದವರಿಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಸಂತಾಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಅವರ ಕುಟುಂಬಗಳೊಂದಿಗಿದೆ ಎಂದು ಧೈರ್ಯ ತುಂಬಿದ್ದಾರೆ. ಇದನ್ನೂ ಓದಿ: ಜಂಬೂ ಸವಾರಿ ಭದ್ರತೆಗೆ ವಿಶೇಷ ಆದ್ಯತೆ- 5000 ಪೊಲೀಸರ ನಿಯೋಜನೆ
Advertisement
पौड़ी गढ़वाल में धुमाकोट रिखणीखाल बस हादसे में उत्तराखंड पुलिस और एसडीआरएफ ने स्थानीय लोगों के साथ मिलकर 21 लोगों को बचाया। @ANI pic.twitter.com/wgrf4HNkee
— Ashok Kumar IPS (@AshokKumar_IPS) October 5, 2022
ಇನ್ನೊಂದೆಡೆ ಮಂಗಳವಾರ ಉತ್ತರಾಖಂಡದ (Uttarakhand) ದ್ರೌಪದಿ ಕಾ ದಂಡಾ-2 (Draupadi ka Danda) ಶಿಖರದಲ್ಲಿ ಇಂದು ಭಾರೀ ಹಿಮಪಾತ (Avalanche) ಸಂಭವಿಸಿದ್ದು, 20ಕ್ಕೂ ಹೆಚ್ಚು ಪರ್ವತಾರೋಹಿರು (Mountaineers) ಹಿಮದಲ್ಲಿ ಸಿಲುಕಿದ್ದರು. ವರದಿಗಳ ಪ್ರಕಾರ ನಾಪತ್ತೆಯಾದವರು ಉತ್ತರ ಕಾಶಿಯ ನೆಹರೂ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್‌ನವರಾಗಿದ್ದಾರೆ. ಟ್ರಕ್ಕಿಂಗ್ ತೆರಳಿದ್ದ 40 ಜನರ ಗುಂಪಿನಲ್ಲಿ 22 ವಿದ್ಯಾರ್ಥಿಗಳು ಹಾಗೂ 7 ಮಂದಿ ಬೋಧಕರಿದ್ದರು ಎಂದು ವರದಿಯಾಗಿದೆ.