ದಾವೂದ್ ಇಬ್ರಾಹಿಂನ ತಲೆಗೆ 25 ಲಕ್ಷ ನಗದನ್ನು ಘೋಷಿಸಿದ ಎನ್‍ಐಎ

Advertisements

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸುಳಿವು ಕೊಟ್ಟವರಿಗೆ 25 ಲಕ್ಷ ರೂ. ನಗದನ್ನು ಬಹುಮಾನವಾಗಿ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಘೋಷಿಸಿದೆ.

Advertisements

ಭೂಗತ ಪಾತಕಿ ದಾವೂದ್ ಹಾಗೂ ಆತನ ಸಹಚರರು ಭಾರತದಲ್ಲಿ ನಕಲಿ ಹಣ ಮಾರಾಟ ಹಾಗೂ ಡ್ರಗ್ಸ್, ಶಸ್ತ್ರಾಸ್ತ್ರಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದಾರೆ. ಇದರ ಜೊತೆಗೆ ಪಾಕ್ ಏಜೆನ್ಸಿಗಳು ಹಾಗೂ ಭಯೋತ್ಪಾದಕ ಸಂಘಟನೆಗಳೊಂದಿಗೆ ಸೇರಿ ಆತ ಹಾಗೂ ಆತನ ಸಹಚರರು ಭಾರತದ ಮೇಲೆ ದಾಳಿಗಳನ್ನು ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisements

ಈ ಹಿನ್ನೆಲೆಯಲ್ಲಿ ಎನ್‍ಐಎ ಸಂಸ್ಥೆಯಿಂದ ಇಬ್ರಾಹಿಂ, ಇಬ್ರಾಹಿಂನ ಸಹೋದರ ಅನೀಸ್ ಇಬ್ರಾಹಿಂ ಅಲಿಯಾಸ್ ಹಾಜಿ ಅನೀಸ್ ಹಾಗೂ ಆತನ ಸಹಾಯಕರಾದ ಛೋಟಾ ಶಕೀಲ್, ಜಾವೇದ್ ಪಟೇಲ್ ಅಲಿಯಾಸ್ ಜಾವೇದ್ ಚಿಕ್ನಾ, ಇಬ್ರಾಹಿಂ ಮುಷ್ತಾಕ್ ಅಬ್ದುಲ್ ರಜಾಕ್ ಮೆಮನ್ ಅಲಿಯಾಸ್ ಟೈಗರ್ ಮೆಮನ್‍ನ ಸುಳಿವು ನೀಡಿದವರಿಗೆ ಬಹುಮಾನವನ್ನು ಘೋಷಿಸಿದೆ. ಇಬ್ರಾಹಿಂ ತಲೆಗೆ 25 ಲಕ್ಷ, ಛೋಟಾ ಶಕೀಲ್ ಸುಳಿವು ನೀಡಿದವರಿಗೆ 20 ಲಕ್ಷ, ಅನೀಸ್, ಚಿಕ್ನಾ ಹಾಗೂ ಮೆಮನ್ ಸುಳಿವು ನೀಡಿದವರಿಗೆ ತಲಾ 15 ಲಕ್ಷ ನಗದನ್ನು ಸಂಸ್ಥೆ ಘೋಷಿಸಿದೆ. ಇದನ್ನೂ ಓದಿ: ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ 91.50 ರೂ. ಇಳಿಕೆ

ಪಾಕಿಸ್ತಾನದ ಕರಾಚಿಯಲ್ಲಿ ನೆಲೆಸಿರುವ ಮತ್ತು 1993ರ ಮುಂಬೈ ಸರಣಿ ಸ್ಫೋಟ ಸೇರಿದಂತೆ ಭಾರತದಲ್ಲಿ ಅನೇಕ ಭಯೋತ್ಪಾದಕ ಚಟುವಟಿಕೆಗಳಲ್ಲಿ ದಾವೂದ್ ಇಬ್ರಾಹಿಂ ತೊಡಗಿದ್ದ. ಈಗಾಗಲೇ 2003ರಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಆತನ ತಲೆಗೆ 25 ಮಿಲಿಯನ್ ಡಾಲರ್ ಬಹುಮಾನವನ್ನು ಘೋಷಿಸಿತ್ತು. ಭಾರತದ ಮೋಸ್ಟ್ ವಾಂಟೆಡ್ ವ್ಯಕ್ತಿಗಳಲ್ಲಿ ಒಬ್ಬನಾದ ಆತ, ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ಮುಖ್ಯಸ್ಥ ಹಫೀಜ್ ಸಯೀದ್, ಜೈಶ್-ಎ-ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮೌಲಾನಾ ಮಸೂದ್ ಅಜರ್, ಹಿಜ್ಬುಲ್ ಮುಜಾಹಿದೀನ್ ಸಂಸ್ಥಾಪಕ ಸೈಯದ್ ಸಲಾಹುದ್ದೀನ್ ಮತ್ತು ಆತನ ಆಪ್ತ ಸಹಾಯಕ ಅಬ್ದುಲ್ ರೌಫ್ ಅಸ್ಗರ್‌ನೊಂದಿಗೆ ಸಂಪರ್ಕ ಹೊಂದಿದ್ದಾನೆ. ಇದನ್ನೂ ಓದಿ: ಗರ್ಭಿಣಿ ಹಸುವಿನ ಮೇಲೆ ರೇಪ್ – ವಿಕೃತ ಕಾಮಿ ಅರೆಸ್ಟ್

Advertisements

Live Tv

Advertisements
Exit mobile version