ದಾವಣಗೆರೆ: ಮದುವೆ ಊಟ ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ಚನ್ನಗಿರಿ ತಾಲೂಕಿನ ಹಟ್ಟಿ ಗ್ರಾಮದಲ್ಲಿ ನಡೆದಿದೆ.
ಹಟ್ಟಿ ಗ್ರಾಮದ ನಿಸಾರ್ ಅಹ್ಮದ್ ಎಂಬವರ ಮದುವೆಗೆ ಸಂಬಂಧಿಕರು, ಸ್ಥಳೀಯರು ಆಗಮಿಸಿ ವಧು-ವರರನ್ನು ಹಾರೈಸಿದರು. ಬಳಿಕ ಮದುವೆಯಲ್ಲಿ ಲಾಡು, ಅನ್ನ ಹಾಗೂ ಸಾಂಬಾರ್ ಊಟ ಮಾಡಿದ್ದಾರೆ. ಆದರೆ ಸಂಜೆಯಾಗುತ್ತಿದ್ದಂತೆ 25ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥಗೊಂಡು ಬೀಳಲು ಪ್ರಾರಂಭಿಸಿದರು. ತಕ್ಷಣವೇ ಅವರನ್ನು ಚನ್ನಗಿರಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು.
ಕೆಲವರ ಸ್ಥಿತಿ ಗಂಭೀರವಾಗಿದ್ದು, ಅಂಥವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.