Connect with us

Chamarajanagar

ಫೀಸ್ ಕಟ್ಟದ್ದಕ್ಕೆ 25 SSLC ವಿದ್ಯಾರ್ಥಿಗಳನ್ನ ಪರೀಕ್ಷೆಯಿಂದ ಹೊರ ಹಾಕಿದ್ರು!

Published

on

ಚಾಮರಾಜನಗರ: ಶೈಕ್ಷಣಿಕ ಶುಲ್ಕ ಪಾವತಿ ಮಾಡಿಲ್ಲವೆಂದು ಎಸ್‍ಎಸ್‍ಎಲ್‍ಸಿ ವ್ಯಾಸಂಗ ಮಾಡುತ್ತಿದ್ದ 25 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕೂರಿಸದೇ ಕೊಠಡಿಯಿಂದ ಹೊರ ಹಾಕಿದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.

ಕೊಳ್ಳೇಗಾಲದ ಜಿ.ವಿ.ಗೌಡ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಾರಂಭವಾಗಿದ್ದವು. ಆದರೆ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶುಲ್ಕ ಪಾವತಿ ಮಾಡಿರಲಿಲ್ಲ. ಹೀಗಾಗಿ ಅವರನ್ನು ಪರೀಕ್ಷಾ ಕೊಠಡಿಯಿಂದ ಹೊರ ಹಾಕಿ ಆಡಳಿತ ಮಂಡಳಿ ಅವಮಾನವೀಯತೆ ಮೆರೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಶಾಲೆಯ ಆಡಳಿತ ಮಂಡಳಿ ವರ್ತನೆಯಿಂದ ಕಂಗಾಲದ ವಿದ್ಯಾರ್ಥಿಗಳು ಶಾಲೆಯಿಂದ ಹೊರಗೆ ಕುಳಿತು ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಎಲ್ಲರಿಗೂ ಒಂದೇ ಮಾದರಿಯಲ್ಲಿ ಶಿಕ್ಷಣ ದೊರಕಬೇಕು ಅಂತಾ ಹೇಳುತ್ತಿದ್ದ ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಕ್ಷೇತ್ರದಲ್ಲಿ ಈ ರೀತಿಯ ಘಟನೆ ನಡೆದಿದೆ.

ಇಂತಹದ್ದೇ ಪ್ರಕರಣವೊಂದು ಬೆಂಗಳೂರಿನ ಜ್ಞಾನಜ್ಯೋತಿ ಶಾಲೆಯಲ್ಲಿ ಇದೇ ಮಾರ್ಚ್ ತಿಂಗಳಿನಲ್ಲಿ ನಡೆದಿತ್ತು. 2018-19ನೇ ಶೈಕ್ಷಣಿಕ ಸಾಲಿನ ಪುಸ್ತಕಗಳ ಶುಲ್ಕ ಪಾವತಿಸದ ಕಾರಣ ನಾಲ್ವರು ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೆ, ಪರೀಕ್ಷಾ ಕೊಠಡಿಯಿಂದ ಹೊರಹಾಕಿದ್ದರು. ಶಾಲಾ ಆಡಳಿತ ಮಂಡಳಿಯ ಈ ನಡೆಯನ್ನು ವಿರೋಧಿಸಿ ಪರೀಕ್ಷೆಯಿಂದ ವಂಚಿತರಾದ ಮಕ್ಕಳ ಪೋಷಕರು, ಶಾಲೆಯ ಎದುರೇ ಪ್ರತಿಭಟನೆ ನಡೆಸಿ ಜೆಪಿ ನಗರ ಪೊಲೀಸ್ ಠಾಣೆಗೆ ಈ ಕುರಿತು ದೂರು ದಾಖಲಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Click to comment

Leave a Reply

Your email address will not be published. Required fields are marked *

www.publictv.in