ಸರ್ಕಾರಿ ಶಾಲೆಯ 25 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು

Public TV
1 Min Read
odisha 1

ಭುಬನೇಶ್ವರ: ಒರಿಸ್ಸಾದ ಮಯೂರ್‌ಭಂಜ್‌ ಜಿಲ್ಲೆಯ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ 25 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಎಲ್ಲಾ ವಿದ್ಯಾರ್ಥಿನಿಯರಿಗೆ ಆರೋಗ್ಯವೂ ಸ್ಥಿರವಾಗಿದೆ. ಎಲ್ಲರನ್ನೂ ಐಸೊಲೇಷನ್‌ನಲ್ಲಿ ಇರಿಸಿದ್ದು, ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ವೈದ್ಯಕೀಯ ಅಧಿಕಾರಿ ಡಾ. ರೂಪವಾನು ಮಿಶ್ರಾ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಒಮಿಕ್ರಾನ್ ಆತಂಕ – ಸೋಂಕಿತ ರಾಷ್ಟ್ರಗಳಿಂದ ಬರೋರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ

odisha 2

ಶಾಲೆಯಲ್ಲಿ ಒಟ್ಟು 256 ವಿದ್ಯಾರ್ಥಿನಿಯರು ಹಾಗೂ 20 ಸಿಬ್ಬಂದಿ ಇದ್ದಾರೆ. ಜಿಲ್ಲೆಯ ವೈದ್ಯಕೀಯ ತಂಡ ಹಾಗೂ ಡಾ. ರಜನಿಕಾಂತ್‌ ಬಿಶ್ವಾಲ್‌ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಕೋವಿಡ್‌ ಸಂಬಂಧ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಕಳೆದ ಎರಡು ದಿನಗಳಿಂದ ಕೆಲವರು ವಿದ್ಯಾರ್ಥಿನಿಯರು ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿದ್ದರು. ಸೋಂಕು ಲಕ್ಷಣ ಇರುವವರನ್ನು ಪರೀಕ್ಷೆಗೆ ಒಳಪಡಿಸಿದಾಗ 22 ವಿದ್ಯಾರ್ಥಿನಿಯರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಡಾ. ಮಿಶ್ರಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್‌ ಭಾರತಕ್ಕೆ ಎಚ್ಚರಿಕೆಯ ಕರೆಗಂಟೆ: ಡಬ್ಲ್ಯೂಎಚ್‌ಒ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್‌

CORONA 3 1

ನಂತರ ಮತ್ತೆ ಮೂರು ವಿದ್ಯಾರ್ಥಿನಿಯರಲ್ಲಿ ಸೋಂಕು ಪತ್ತೆಯಾಗಿದೆ. ಕೆಲವರು ಆಗ ತಾನೆ ಊರುಗಳಿಂದ ಬಂದವರಾಗಿದ್ದಾರೆ. ತಮ್ಮ ಮನೆಯಲ್ಲೇ ಅವರಿಗೆ ಸೋಂಕು ಹರಡಿರುವ ಸಾಧ್ಯತೆ ಇದೆ. ವಿದ್ಯಾರ್ಥಿನಿಯರ ಆರೋಗ್ಯ ದೃಷ್ಟಿಯಿಂದ ಆಂಬ್ಯುಲೆನ್ಸ್‌ ವ್ಯವಸ್ಥೆ ಕೂಡ ಮಾಡಲಾಗಿದೆ. ನಮ್ಮ ವೈದ್ಯರು ಮಕ್ಕಳ ಆರೋಗ್ಯದ ಮೇಲೆ ನಿಗಾವಹಿಸಿದ್ದಾರೆ ಎಂದು ಹೇಳಿದ್ದಾರೆ.

Share This Article