ಯೋಗಿ ಆದಿತ್ಯನಾಥ್‍ಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಯುವತಿ ಸಮಾಜವಾದಿ ಪಕ್ಷದ ಅಭ್ಯರ್ಥಿ

Public TV
1 Min Read
akhilesh yadav

ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದ್ದ 25 ವರ್ಷದ ವಿದ್ಯಾರ್ಥಿನಿ ಪೂಜಾ ಶುಕ್ಲಾ ಈಗ ಲಕ್ನೋ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿದ್ದಾರೆ.

ಜೂನ್ 2017ರಲ್ಲಿ ಇತರ 10 ಮಂದಿ ವಿದ್ಯಾರ್ಥಿಗಳೊಂದಿಗೆ ಲಕ್ನೋ ವಿಶ್ವವಿದ್ಯಾಲಯದ ರಸ್ತೆಯಲ್ಲಿ ಸರ್ಕಾರದ ನೀತಿಗಳ ವಿರುದ್ಧ ಪ್ರತಿಭಟಿಸಿ ಕಪ್ಪು ಬಾವುಟ ಪ್ರದರ್ಶಿಸಿ ಆದಿತ್ಯನಾಥ್ ಅವರ  ಬೆಂಗಾವಲು ವಾಹನವನ್ನು  ತಡೆದಿದ್ದರು. ಈ ವಿಚಾರವಾಗಿ ಇವರನ್ನು ಬಂಧನ ಮಾಡಲಾಗಿತ್ತು.  ಬಳಿಕ 20 ದಿನಗಳ ನಂತರ ಜೈಲಿನಿಂದ ಹೊರಬಂದ ನಂತರ ಪೂಜಾ ಶುಕ್ಲಾ ಅವರು ಎಸ್‌ಪಿ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರನ್ನು ಭೇಟಿಯಾಗಿದ್ದರು. ಬಳಿಕ ಪಕ್ಷದ ವಿದ್ಯಾರ್ಥಿ ವಿಭಾಗವಾದ ಸಮಾಜವಾದಿ ಛತ್ರ ಸಭಾಕ್ಕೆ ಸೇರ್ಪಡೆಗೊಂಡಿದ್ದರು.

akhilesh yadav

ಈ ವಿಚಾರವಾಗಿ ಖಾಸಗಿ ವಾಹಿನಿ ಜೊತೆಗೆ ಮಾತನಾಡಿದ ಪೂಜಾ ಶುಕ್ಲಾ, ಹಿಂದಿ ಸ್ವರಾಜ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಯೋಗಿ ಲಕ್ನೋ ವಿಶ್ವವಿದ್ಯಾಲಯದ ಕ್ಯಾಂಪಸ್‍ಗೆ ತೆರಳುತ್ತಿದ್ದಾಗ, ಅಖಿಲ ಭಾರತ ವಿದ್ಯಾರ್ಥಿ ಸಂಘ, ಭಾರತೀಯ ವಿದ್ಯಾರ್ಥಿ ಒಕ್ಕೂಟ ಮತ್ತು ಸಮಾಜವಾದಿ ಛತ್ರ ಸಭಾದ ವಿದ್ಯಾರ್ಥಿಗಳು ಒಟ್ಟಾಗಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದೆವು. ಯೋಗಿ ಅವರ ಬೆಂಗಾವಲು ವಾಹನವನ್ನು ತಡೆದಿದ್ದೆವು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದೆವು ಎಂದು ಹೇಳಿದ್ದಾರೆ. ಇದನ್ನೂ ಓದಿ:  ಜನಸ್ನೇಹಿ ಬಜೆಟ್, ಎಲ್ಲರಿಗೂ ಸಹಾಯವಾಗುವ ಕಾರ್ಯಕ್ರಮಗಳು: ಆರ್.ಅಶೋಕ್

Akhilesh Yadav

ಪ್ರತಿಭಟನೆಗೆ ಪ್ರಜಾಸತ್ತಾತ್ಮಕ ವಿಧಾನಗಳನ್ನು ಬಳಸಿದ್ದರೂ ನಮ್ಮ ಬಂಧನವಾಗಿತ್ತು. ನಾವು ಬಂಧನಕ್ಕೊಳಗಾಗುತ್ತೇವೆ ಎಂದು ಎಂದಿಗೂ ಯೋಚಿಸಿರಲಿಲ್ಲ. ಆದರೆ ಆ ಘಟನೆ ಒಳ್ಳೆಯದ್ದಕ್ಕಾಗಿ ಹೋರಾಡುವ ನನ್ನ ನಂಬಿಕೆಯನ್ನು ಮತ್ತಷ್ಟು ದೃಢಗೊಳಿಸಿತು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನರೇಗಾ ವಿಶ್ವಕ್ಕೆ ಮಾದರಿ: ಕೆ.ಎಸ್.ಈಶ್ವರಪ್ಪ

Share This Article
Leave a Comment

Leave a Reply

Your email address will not be published. Required fields are marked *