ನವದೆಹಲಿ: ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆ ಮತ್ತು ಹಿಂಸಾಚಾರಗಳಿಂದ ರೈಲ್ವೆ ಇಲಾಖೆಗೆ 259.44 ಕೋಟಿ ರೂ. ನಷ್ಟವಾಗಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.
Advertisement
ಜೂನ್ 15 ರಿಂದ 23ರ ಅವಧಿಯಲ್ಲಿ 2,132 ರೈಲುಗಳ ಸಂಚಾರ ರದ್ದಾಗಿತ್ತು. ಈ ನಡುವೆ ಜೂನ್ 14 ರಿಂದ 30ರ ಅವಧಿಯಲ್ಲಿ 102 ರೂಪಾಯಿ ಹಣವನ್ನ ಪ್ರಯಾಣಿಕರಿಗೆ ಮರುಪಾವತಿ ಮಾಡಲಾಯಿತು. ಈ ಕಾರಣಗಳಿಂದ 259.44 ಕೋಟಿ ರೂ. ನಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: Bundelkhand Expressway; ಒಂದು ವಾರಕ್ಕೇ ಮಳೆಗೆ ಗುಂಡಿ ಬಿತ್ತು ಪ್ರಧಾನಿ ಮೋದಿ ಉದ್ಘಾಟಿಸಿದ್ದ ರಸ್ತೆ
Advertisement
Advertisement
ಈ ಮಧ್ಯೆ ಅಗ್ನಿಪಥ್ ಯೋಜನೆ ಕುರಿತಾಗಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ರಕ್ಷಣಾ ವಿಭಾಗದ ಸಂಸದೀಯ ಸ್ಥಾಯಿ ಸಮಿತಿಯ ಮೂವರು ಸಭೆಯಿಂದ ಮಧ್ಯದಲ್ಲೇ ನಿರ್ಗಮಿಸಿದ್ದಾರೆ. ಕಾಂಗ್ರೆಸ್‌ನ ಕೆ.ಸಿ.ವೇಣುಗೋಪಾಲ್, ಉತ್ತಮ್‌ಕುಮಾರ್ ರೆಡ್ಡಿ ಹಾಗೂ ಬಿಎಸ್‌ಪಿ ಸಂಸದ ಡ್ಯಾನಿಶ್ ಆಲಿ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.