– 25,000 ಶಿಕ್ಷಕರ ಕೆಲಸಕ್ಕೆ ಕುತ್ತು – ವೇತನ ಹಿಂದಿರುಗಿಸಲು 4 ವಾರಗಳ ಗಡುವು
ಕೋಲ್ಕತ್ತಾ: ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ನಡೆದಿದ್ದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016 (SLST) ಅನ್ನು ಅನೂರ್ಜಿತಗೊಳಿಸಿ ಕೋಲ್ಕತ್ತಾ ಹೈಕೋರ್ಟ್ (Calcutta High Court) ಆದೇಶಿಸಿದೆ.
Advertisement
ಅಷ್ಟೇ ಅಲ್ಲ, ಈ ಮೂಲಕ ಮಾಡಲಾದ ಎಲ್ಲಾ ನೇಮಕಾತಿಗಳನ್ನು ರದ್ದುಗೊಳಿಸುವಂತೆ ಆದೇಶಿರುವ ಕೋರ್ಟ್ ಕಾನೂನು ಬಾಹಿರವಾಗಿ ನೇಮಕಗೊಂಡ ಶಾಲಾ ಶಿಕ್ಷಕರು (Teachers Recruitment) 4 ವಾರಗಳಲ್ಲಿ ತಮ್ಮ ವೇತನ ಹಿಂದಿರುಗಿಸಬೇಕು ಎಂದೂ ಹೇಳಿದೆ. ಶಿಕ್ಷಕರಿಂದ ಹಣ ವಸೂಲಿ ಮಾಡುವ ಜವಾಬ್ದಾರಿಯನ್ನು ಆಯಾ ಜಿಲ್ಲಾ ವ್ಯಾಪ್ತಿಯ ಜಿಲ್ಲಾಧಿಕಾರಿಗಳಿಗೆ ಕೋರ್ಟ್ ವಹಿಸಿದೆ. ಇದರಿಂದ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ (Mamata Banerjee Govt.) ದೊಡ್ಡ ಹಿನ್ನಡೆಯಾಗಿದೆ. ಇದನ್ನೂ ಓದಿ: ಅಣಕು ಮತ ಎಣಿಕೆ ವೇಳೆ ಬಿಜೆಪಿಗೆ ಹೆಚ್ಚುವರಿ ಮತ – ವರದಿ ಸುಳ್ಳೆಂದ ಚುನಾವಣಾ ಆಯೋಗ
Advertisement
Advertisement
ನ್ಯಾಯಮೂರ್ತಿಗಳಾದ ದೇಬಂಗ್ಲು ಬಸಾಕ್ ಮತ್ತು ಮೊಹಮ್ಮದ್ ಶಬ್ಬರ್ ರಶೀದಿ ಅವರನ್ನೊಳಗೊಂಡ ವಿಭಾಗೀಯ ಪೀಠವು ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಳ್ಳಲು ಮತ್ತು 3 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದೆ. ಜೊತೆಗೆ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗಕ್ಕೆ (WBSSC) ಹೊಸದಾಗಿ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಕೇಳಿದೆ. ಕೋಲ್ಕತ್ತಾ ಹೈಕೋರ್ಟ್‌ನ ಈ ಆದೇಶವನ್ನು ಸದ್ಯದಲ್ಲೇ ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 14 ವರ್ಷದ ಅಪ್ರಾಪ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಅನುಮತಿ
Advertisement
ಏನಿದು ಪ್ರಕರಣ?:
ಈ ಹಿಂದೆ 24.640 ಖಾಲಿ ಹುದ್ದೆಗಳಿಗೆ 23 ಲಕ್ಷ ಅಭ್ಯರ್ಥಿಗಳು SLST-2016 ಪರೀಕ್ಷೆ ಬರೆದಿದ್ದರು. ಆದ್ರೆ ಸರ್ಕಾರ 24,640 ಖಾಲಿ ಹುದ್ದೆಗಳಿಗೆ ಒಟ್ಟು 25,753 ನೇಮಕಾತಿ ಪತ್ರಗಳನ್ನು ನೀಡಲಾಗಿದೆ ಎಂದು ಅರ್ಜಿದಾರರ ಪರ ವಕೀಲ ಫಿರ್ದೌಸ್ ಶಮೀಮ್ ಆರೋಪಿಸಿದ್ದರು. ಈ ಅರ್ಜಿಯನ್ನು ಕೋರ್ಟ್ ಸೋಮವಾರ ವಿಚಾರಣೆ ನಡೆಸಿತು. ಕೋರ್ಟ್ ಆದೇಶದ ಬಳಿಕ ಈ ದಿನಕ್ಕಾಗಿ ನಾವು ಕಾಯುತ್ತಿದ್ದೆವು. ಹಲವು ವರ್ಷಗಳ ಹೋರಾಟದ ಬಳಿಕ ಕೊನೆಗೂ ನ್ಯಾಯ ಸಿಕ್ಕಿದೆ ಉದ್ಯೋಗ ಆಕಾಂಕ್ಷಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ವಿಭಾಗೀಯ ಪೀಠವನ್ನು ರಚಿಸಿದ್ದರು. 9, 10, 11, 12ನೇ ತರಗತಿಯ ಶಿಕ್ಷಕರು ಸಿ, ಡಿ ದರ್ಜೆ ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದ 2016 ಎಎಲ್‌ಎಸ್‌ಟಿ ನೇಮಕಾತಿ ಬಗ್ಗೆ ನ್ಯಾಯಪೀಠ ಬಹಳಷ್ಟು ಅರ್ಜಿಗಳು ಮತ್ತು ಮನವಿಗಳನ್ನು ಆಲಿಸಿತ್ತು. ಇದನ್ನೂ ಓದಿ: ಮನೆಯಿಂದ ಕಳುಹಿಸಿದ 48 ಊಟಗಳಲ್ಲಿ ಕೇವಲ ಮೂರು ಬಾರಿ ಮಾತ್ರ ಮಾವಿನ ಹಣ್ಣಿತ್ತು – ಇಡಿ ಆರೋಪಕ್ಕೆ ಕೇಜ್ರಿವಾಲ್ ತಿರುಗೇಟು