ಮೈಸೂರು: ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವ ಕಾರಣ ಮೈಸೂರು (Mysuru) ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯ (Kabini Dam) ಭರ್ತಿಯಾಗಿದೆ.
ದಿನದಿಂದ ದಿನಕ್ಕೆ ಜಲಾಶಯದ ಒಳಹರಿವು ಹೆಚ್ಚಾಗುತ್ತಿರುವ ಕಾರಣ ಇಂದು 4 ಕ್ರಸ್ಟ್ ಗೇಟ್ ತೆರೆದು 25 ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ನಿನ್ನೆ 15 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂಗೆ 25,000 ಕ್ಯುಸೆಕ್‌ಗೂ ಅಧಿಕ ನೀರು
ಕಬಿನಿ ಜಲಾಶಯ ಗರಿಷ್ಠ ಮಟ್ಟ 2284 ಅಡಿ ಆಗಿದ್ದು, ಇಂದಿನ ನೀರಿನ ಮಟ್ಟ 2283 ಅಡಿ ಇದೆ. ಒಳ ಹರಿವು 20,217 ಕ್ಯುಸೆಕ್ ಇದೆ. 25 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಿದ ಪರಿಣಾಮ ಹಲವು ಸಣ್ಣ ಸೇತುವೆಗಳು ಮುಳುಗಡೆಯಾಗಲಿದೆ. ಮತ್ತಷ್ಟು ಮಳೆಯಾಗಿ 50 ಸಾವಿರ ಕ್ಯುಸೆಕ್ ನೀರನ್ನು ಬಿಡುಗಡೆ ಮಾಡಿದರೆ ದೊಡ್ಡ ಸೇತುವೆಗಳು ಮುಳುಗಡೆಯಾಗಲಿದೆ.