ಚಾಮರಾಜನಗರ: ಆಹಾರ ಅರಸಿ ರಸ್ತೆಗಿಳಿದ ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಚೆಲ್ಲಾಟ ಆಡಿದ್ದ ವ್ಯಕ್ತಿಗೆ ಅರಣ್ಯ ಇಲಾಖೆಯು 25 ಸಾವಿರ ರೂ. ದಂಡ ವಿಧಿಸಿ, ವನ್ಯಜೀವಿಗಳಿಗೆ ತೊಂದರೆ ಕೊಡದಂತೆ ಮುಚ್ಚಳಿಕೆ ಬರೆಸಿಕೊಂಡಿದೆ.
ಗುಂಡ್ಲುಪೇಟೆಯ ಶಾಹುಲ್ ಹಮೀದ್, ಇತ್ತೀಚಿಗಷ್ಟೇ ಆಹಾರ ಅರಸಿ ರಸ್ತೆಗಿಳಿದ ಕಾಡಾನೆ ಮುಂದೆ ಫೋಟೋಗಾಗಿ ಹುಚ್ಚಾಟ ಮೆರೆದು, ಕಾಡಾನೆ ಮುಂದೆ ಕಿರುಚಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.ಇದನ್ನೂ ಓದಿ: ಫ್ಯಾನ್ಸ್‌ಗೆ ಗುಡ್ ನ್ಯೂಸ್- ಸಾಲು ಸಾಲು ಸಿನಿಮಾಗಳು ರಿಲೀಸ್‌ಗೆ ರೆಡಿ
Advertisement
Advertisement
ವೀಡಿಯೋದಲ್ಲಿ ರಸ್ತೆಗೆ ಬಂದ ಕಾಡಾನೆ ಕಂಡು ಪೋಟೋ ತೆಗೆಸಿಕೊಂಡು ಹಾ, ಹೂ ಎಂದು ಕಿರುಚಾಡಿ ಕೀಟಲೆ ಮಾಡಿದ್ದರು. ಕಾಡಾನೆ ಎದುರು ಹುಚ್ಚಾಟ ಮೆರೆದ ಯುವಕನನ್ನು ಬಂಧಿಸಬೇಕೆಂದು ಪರಿಸರವಾದಿಗಳು ಆಗ್ರಹಿಸಿದ್ದರು.
Advertisement
ವೀಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಬಂಡೀಪುರ ಅರಣ್ಯ ಇಲಾಖೆಯು 25 ಸಾವಿರ ರೂ. ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ. ಮತ್ತೆ ಇಂತಹ ಘಟನೆ ಪುನರಾವರ್ತನೆ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಬಿಜೆಪಿ ಸಂಸದರಿಗೆ ಧಮ್ ಇದ್ರೆ ಮೆಟ್ರೋ ದರ ಕಡಿಮೆ ಮಾಡಿಸಲಿ: ಕೇಂದ್ರದ ವಿರುದ್ಧ ಪ್ರಿಯಾಂಕ್ ಕಿಡಿ
Advertisement