– ಬೆಂಗಳೂರಿನಲ್ಲಿ 5,701 ಕೇಸ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿಧಾನವಾಗಿ ಕಡಿಮೆಯಾಗುತ್ತಿದ್ದು, ಕರ್ನಾಟಕದಲ್ಲಿ ಇಂದು 25,311 ಮಂದಿಗೆ ಸೋಂಕು ತಗುಲಿದ್ದು, 529 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. 57,333 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಲ್ಲಿಯವರೆಗೆ ರಾಜ್ಯದಲ್ಲಿ 24,50,215 ಮಂದಿಗೆ ಕೊರೊನಾ ಬಂದಿದ್ದು, ಈ ಪೈಕಿ ಒಟ್ಟು 19,83,948 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,40,435ಕ್ಕೆ ತಲುಪಿದೆ.
Advertisement
Advertisement
ಇಂದು 529 ಜನ ಕೊರೊನಾಗೆ ಬಲಿಯಾಗಿದ್ದು, ಈ ವರೆಗೆ ರಾಜ್ಯದಲ್ಲಿ ಒಟ್ಟು 25,811 ಜನ ಸಾವನ್ನಪ್ಪಿದ್ದಾರೆ. ಇಂದು 57,333 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಕೋವಿಡ್ ಸೋಂಕಿನ ಖಚಿತ ಪ್ರಮಾಣ ಶೇ.23.28ರಷ್ಟಿದ್ದು, ಮೃತರ ಪ್ರಮಾಣ ಶೇ.2.09ರಷ್ಟಿದೆ. ಏಪ್ರಿಲ್ ತಿಂಗಳಿನಲ್ಲಿ ಮೃತಪಟ್ಟವರ ವಿವರಗಳು ತಡವಾಗಿ ಬೆಳಕಿಗೆ ಬರುತ್ತಿರುವ ಕಾರಣ ಈಗ ಸಾವಿನ ಸಂಖ್ಯೆ ಜಾಸ್ತಿಯಾಗುತ್ತಿದೆ.
Advertisement
Advertisement
ಇಂದು 14,275 ಆಂಟಿಜನ್ ಟೆಸ್ಟ್, 94,448 ಆರ್‌ಟಿಪಿಸಿಆರ್ ಸೇರಿದಂತೆ ಒಟ್ಟು 1,08,723 ಕೊರೊನಾ ಪರೀಕ್ಷೆ ಮಾಡಲಾಗಿದೆ. ಇಂದು ರಾಜ್ಯದಲ್ಲಿ ಒಟ್ಟು 1,07,562 ಮಂದಿಗೆ ಲಸಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ 5,701 ಮಂದಿಗೆ ಕೊರೊನಾ ದೃಢಪಟ್ಟಿದ್ದು, 297 ಜನ ಸಾವನ್ನಪ್ಪಿದ್ದಾರೆ. ಇನ್ನೂ 2,26,868 ಸಕ್ರಿಯ ಪ್ರಕರಣಗಳಿವೆ. ಮೈಸೂರು 2,680, ಹಾಸನ 1,156, ತುಮಕೂರು 1,662, ಧಾರವಾಡ 1,058 ಹಾಗೂ ಉತ್ತರ ಕನ್ನಡದಲ್ಲಿ 1,110 ಪ್ರಕರಣಗಳು ವರದಿಯಾಗಿವೆ.