ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣದಲ್ಲಿ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿದೆ. ಇಂದು 254 ಮಂದಿಯಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ.
Advertisement
ಕೊರೊನಾ ಸಾವಿನ ಸಂಖ್ಯೆಯಲ್ಲಿ ಕೂಡ ಇಳಿಕೆ ಕಂಡಿದ್ದು, ಇಂದು ಕೇವಲ ಇಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು 151 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. 173 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಓರ್ವ ಮೃತಪಟ್ಟಿರುವುದು ವರದಿಯಾಗಿದೆ.
Advertisement
Advertisement
ರಾಜ್ಯದಲ್ಲಿ 316 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,306 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,89,014 ಮಂದಿಗೆ ಕೊರೊನಾ ಬಂದಿದೆ. 29,42,588 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.78 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.33 ರಷ್ಟಿದೆ. ಇದನ್ನೂ ಓದಿ: ಎಸಿಬಿ ದಾಳಿಯಿಂದ ತಪ್ಪಿಸಿ ಓಡಿದ ಪಿಎಸ್ಐಯನ್ನು ಹಿಡಿಯಲು ಬೆನ್ನತ್ತಿದ ಸಾರ್ವಜನಿಕರು!
Advertisement
ಇಂದು ರಾಜ್ಯದಲ್ಲಿ ಇಂದು ಒಟ್ಟು 55058 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 76,420 ಸ್ಯಾಂಪಲ್ (ಆರ್ಟಿ ಪಿಸಿಆರ್ 56,526 + 19,894 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಉಪಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಟಾರ್ಗೆಟ್ ಮಾಡಿದವು: ಹೆಚ್.ಡಿ.ರೇವಣ್ಣ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಇಂದು ಒಟ್ಟು 13 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 151, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 12, ದಾವಣಗೆರೆ 0, ಧಾರವಾಡ 1, ಗದಗ 0, ಹಾಸನ 8, ಹಾವೇರಿ 0, ಕಲಬುರಗಿ 0, ಕೊಡಗು 5, ಕೋಲಾರ 0, ಕೊಪ್ಪಳ 0, ಮಂಡ್ಯ 6, ಮೈಸೂರು 19, ರಾಯಚೂರು 1, ರಾಮನಗರ 1, ಶಿವಮೊಗ್ಗ 1, ತುಮಕೂರು 11, ಉಡುಪಿ 11, ಉತ್ತರ ಕನ್ನಡ 12, ವಿಜಯಪುರ ಮತ್ತು ಯಾದಗಿರಿಯಲ್ಲಿ 0 ಪ್ರಕರಣ ದಾಖಲಾಗಿದೆ.
ಇಂದಿನ 03/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/RVplsZuxwO
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/POPmEsyxy6
— K'taka Health Dept (@DHFWKA) November 3, 2021