ಬೆಂಗಳೂರು: ಮತ್ತೆ ಕೋವಿಡ್ (Covid) ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ (Karnataka) 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿದೆ.
ಏಷ್ಯಾದಲ್ಲಿ ಕೋವಿಡ್ ಹಾವಳಿ ಮತ್ತೆ ಶುರುವಾಗಿದ್ದು, ಸಿಂಗಾಪುರ, ಹಾಂಕಾಂಗ್ ಬಳಿಕ ದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಎಲ್‌ಎಫ್.7 ಮತ್ತು ಎನ್‌ಬಿ.1.8 ತಳಿಗಳು ಪತ್ತೆಯಾಗಿದ್ದು, ಕೊರೊನಾದ ಜೆಎನ್.1 ಗೆ ಸೇರಿದೆ.ಇದನ್ನೂ ಓದಿ: 593 ಭರವಸೆ ಕೊಟ್ಟಿದ್ವಿ, 2 ವರ್ಷಗಳಲ್ಲಿ 242 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ
ಇದುವರೆಗೂ ಭಾರತದಲ್ಲಿ 257 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 8 ಕೇಸ್ ಪತ್ತೆಯಾಗಿದ್ದು, ಕೇರಳದಲ್ಲಿ 69, ಮಹಾರಾಷ್ಟ್ರ 44, ತಮಿಳುನಾಡು 34, ಗುಜರಾತ್, ದೆಹಲಿ, ಹರ್ಯಾಣ, ರಾಜಸ್ಥಾನ, ಸಿಕ್ಕಿಂನಲ್ಲೂ ಪಾಸಿಟಿವ್ ಕೇಸ್‌ಗಳಿವೆ. ಸದ್ಯ ಯಾವುದೇ ರೀತಿಯ ಗಂಭೀರವಾದ ಗುಣಲಕ್ಷಣಗಳು ಕಾಣಿಸಿಕೊಂಡಿಲ್ಲ. ಹೀಗಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಆದರೆ ನಿರ್ಲಕ್ಷ್ಯ ಬೇಡ ಎಂದು ಆರೋಗ್ಯ ಇಲಾಖೆ ತಿಳಿಸಿದ್ದು, ಎಲ್ಲ ಕಡೆ ಸಂದೇಶ ರವಾನಿಸಿದ್ದು, ಕಟ್ಟೆಚ್ಚರ ವಹಿಸಿದೆ.
ಈಗಾಗಲೇ ಸಿಂಗಾಪುರ ಮತ್ತು ಹಾಂಗ್‌ಕಾಂಗ್‌ನಲ್ಲಿ ಅಲರ್ಟ್ ಘೋಷಿಸಲಾಗಿದೆ. ಸಿಂಗಾಪುರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಮೇ 03 ರಿಂದ ಮೆ 16ರ ವರೆಗೆ 14,200 ಕೇಸ್ ದಾಖಲಾಗಿದೆ ಎಂದು ಸಿಂಗಾಪುರ ಆರೋಗ್ಯ ಸಚಿವಾಲಯ ತಿಳಿಸಿದೆ.ಇದನ್ನೂ ಓದಿ: ಮೇ 22ರಂದು ಪ್ರಧಾನಿ ಮೋದಿಯಿಂದ ರಾಜ್ಯದ 5 ಸೇರಿ 103 ಅಮೃತ ರೈಲ್ವೆ ನಿಲ್ದಾಣಗಳ ಉದ್ಘಾಟನೆ