ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 259 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ. ಇನ್ನೊಂದೆಡೆ ಬೆಂಗಳೂರು ನಗರದಲ್ಲಿ ಇಂದು ಕೂಡ 200ಕ್ಕೂ ಅಧಿಕ ಕೇಸ್ ವರದಿಯಾಗಿದೆ.
ಬೆಂಗಳೂರಿನಲ್ಲಿ 243 ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಮೂಲಕ ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,107ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ಹೊರತು ಪಡಿಸಿ ದಕ್ಷಿಣಕನ್ನಡದಲ್ಲಿ ದಾಖಲಾದ 5 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,229ಕ್ಕೆ ತಲುಪಿದೆ. ಇದನ್ನೂ ಓದಿ: ಮರಕ್ಕೆ ಬೈಕ್ ಡಿಕ್ಕಿಯಾಗಿ ಯುವಕ-ಯುವತಿ ದಾರುಣ ಸಾವು
ಬೆಂಗಳೂರು ಹೊರತು ಪಡಿಸಿ ಉಳಿದಂತೆ 7 ಜಿಲ್ಲೆಗಳಲ್ಲಿ 16 ಕೇಸ್ ಮತ್ತು 22 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 234 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.06 ದಾಖಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 40,065 ಮರಣ ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ಟೀ ಅಂಗಡಿಯಲ್ಲಿ ಅಗ್ನಿ ಅವಘಡ- ಬಾಲಕಿ ಗಂಭೀರ
ಈವರೆಗೆ ರಾಜ್ಯದಲ್ಲಿ ಒಟ್ಟು 39,52,836 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,10,500 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 67,114 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 12,517 ಸ್ಯಾಂಪಲ್ (ಆರ್ಟಿಪಿಸಿಆರ್ 8,332 + 4,185 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 243, ದಕ್ಷಿಣ ಕನ್ನಡ 5, ಬೆಳಗಾವಿ 4, ಶಿವಮೊಗ್ಗ ಮತ್ತು ಮೈಸೂರಿನಲ್ಲಿ ತಲಾ 2, ಬಳ್ಳಾರಿ, ಚಿಕ್ಕಮಗಳೂರು ಮತ್ತು ಚಿತ್ರದುರ್ಗದಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 259 ಕೇಸ್ ವರದಿಯಾಗಿದೆ.