ನವದೆಹಲಿ: ಮುಂಬೈ ದಾಳಿಯ (Mumbai Attack) ಸಂಚುಕೋರ, 64 ವರ್ಷ ವಯಸ್ಸಿನ ತಹವ್ವೂರ್ ರಾಣಾನ (Tahawwur Rana) ಫೋಟೊ ರಿಲೀಸ್ ಆಗಿದೆ. ಎನ್‌ಐಎ ಅಧಿಕಾರಿಗಳ ಜೊತೆ ರಾಣಾ ಇರುವ ಫೋಟೊ ಬಹಿರಂಗಗೊಂಡಿದೆ.
ತಹವ್ವೂರ್ ಹುಸೇನ್ ರಾಣಾನನ್ನು ಎನ್‌ಐಎ ಅಧಿಕಾರಿಗಳು ಔಪಚಾರಿಕ ಬಂಧನ ಮಾಡಿದ್ದಾರೆ. ಪಾಲಂ ಏರ್‌ಬೇಸ್‌ನಲ್ಲಿ ಇಂದು ಸಂಜೆ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ರಾಣಾನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಹೈಟೆಕ್ ವಿಮಾನ, ಬುಕಾರೆಸ್ಟ್‌ನಿಂದ 11 ಗಂಟೆ ಪ್ರಯಾಣ – ಉಗ್ರ ರಾಣಾನನ್ನ ಅಮೆರಿಕದಿಂದ ಭಾರತಕ್ಕೆ ಕರೆತಂದಿದ್ದು ಹೇಗೆ?
26/11 ಭಯೋತ್ಪಾದಕ ದಾಳಿಯ ಸಂಚುಕೋರ, ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ತಹವ್ವೂರ್ ಹುಸೇನ್ ರಾಣಾನನ್ನು ಗುರುವಾರ ದೆಹಲಿಯ ವಿಮಾನ ನಿಲ್ದಾಣಕ್ಕೆ ಕರೆತರಲಾಯಿತು. ಬುಧವಾರ ವಿಶೇಷ ವಿಮಾನದಲ್ಲಿ ಅಮೆರಿಕದಿಂದ ಆತನನ್ನು ಗಡೀಪಾರು ಮಾಡಲಾಗಿತ್ತು.
ಭಯೋತ್ಪಾದಕ ರಾಣಾನನ್ನು ದೆಹಲಿಯ ಹೆಚ್ಚಿನ ಭದ್ರತೆ ಕಲ್ಪಿಸಲಾಗಿರುವ ತಿಹಾರ್ ಜೈಲಿನಲ್ಲಿ ಇರಿಸಬಹುದು. ಅಂತಿಮವಾಗಿ ವಿಚಾರಣೆಯನ್ನು ಎದುರಿಸಲು ಮುಂಬೈಗೆ ಸ್ಥಳಾಂತರಿಸಬಹುದು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮುಂಬೈ ದಾಳಿ ಮಾಸ್ಟರ್‌ಮೈಂಡ್ ತಹವ್ವೂರ್ ರಾಣಾ ಅರೆಸ್ಟ್
ಉಗ್ರನ ಮೇಲೆ ಕ್ರಿಮಿನಲ್ ಪಿತೂರಿ, ಭಾರತ ಸರ್ಕಾರದ ವಿರುದ್ಧ ಯುದ್ಧ ಸಾರುವುದು, ಕೊಲೆ ಮತ್ತು ನಕಲಿ ದಾಖಲೆ ಸೃಷ್ಟಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.