ಗುವಾಹಟಿ: ಅಸ್ಸಾಂನ (Assam) ಕಾಜಿರಂಗ ರಾಷ್ಟ್ರೀಯ ಉದ್ಯಾನದ (Kaziranga National Park) ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 26 ಮಂದಿಯ ಕುಟುಂಬಗಳಿಗೆ ತಲಾ 9 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಘೋಷಿಸಿದ್ದಾರೆ.
ಶುಕ್ರವಾರ ಕಾಜಿರಂಗದ ರಂಗಾಜನ್ನಲ್ಲಿ ರಾಷ್ಟ್ರೀಯ ಹೆದ್ದಾರಿ 715ರಲ್ಲಿ ಮಿನಿಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಈ ಭೀಕರ ಅಪಘಾತದಲ್ಲಿ 26 ಮಂದಿ ಮೃತಪಟ್ಟಿದ್ದರು. ಮೃತರಲ್ಲಿ ಬಹುತೇಕರು ಕಾಲೇಜು ವಿದ್ಯಾರ್ಥಿಗಳಾಗಿದ್ದು, ತರಗತಿ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ದುರಂತ ಸಂಭವಿಸಿತ್ತು. ಇದನ್ನೂ ಓದಿ: ಮೋದಿ ದುಡ್ಡಲ್ಲೇ ಮೆಟ್ರೋ ಟಿಕೆಟ್ ತೆಗೆದುಕೊಂಡ ಡಿಕೆಶಿ; ಪಿಎಂ-ಸಿಎಂ ಮೆಟ್ರೋ ಜರ್ನಿಯ ಸ್ವಾರಸ್ಯಕರ ಸಂಗತಿ ರಿವೀಲ್
ಅಪಘಾತ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ., ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ 2 ಲಕ್ಷ ರೂ. ಹಾಗೂ ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ 2 ಲಕ್ಷ ರೂ. ಸೇರಿದಂತೆ ಒಟ್ಟು 9 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಮಹಿಳೆಯರು 2,000ಕ್ಕೆ ಮರುಳಾಗಬೇಡಿ.. ನಾನು ತಿಂಗಳಿಗೆ 5,000 ರೂ. ಬರುವಂತೆ ಮಾಡಬಲ್ಲೆ: ‘ಗೃಹಲಕ್ಷ್ಮಿ’ಯರಿಗೆ ಹೆಚ್ಡಿಕೆ ಮನವಿ
ಮೃತದೇಹಗಳ ಮರಣೋತ್ತರ ಪರೀಕ್ಷೆ ಪೂರ್ಣಗೊಂಡು ಕುಟುಂಬಗಳ ಮನೆಗಳಿಗೆ ತಲುಪಿದ ಬಳಿಕ ಸಚಿವರು ಖುದ್ದಾಗಿ ಮನೆಗಳಿಗೆ ತೆರಳಿ ಪರಿಹಾರದ ಹಣವನ್ನು ಹಸ್ತಾಂತರಿಸಲಿದ್ದಾರೆ. ಈ ದುರಂತಕ್ಕೆ ಯಾವುದೇ ಮೊತ್ತದ ಹಣದಿಂದ ಪರಿಹಾರ ನೀಡಲು ಸಾಧ್ಯವಿಲ್ಲ. ಅದರಲ್ಲೂ ಒಂದೇ ಕುಟುಂಬದ ಒಂದಕ್ಕಿಂತ ಹೆಚ್ಚು ಸದಸ್ಯರನ್ನು ಕಳೆದುಕೊಂಡಿರುವ ಕುಟುಂಬಗಳ ನೋವು ಹೇಳತೀರದು. ಮೃತರ ಕುಟುಂಬಗಳೊಂದಿಗೆ ಸರ್ಕಾರ ಸದಾ ಇರಲಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಪ್ರತಿಯೊಬ್ಬ ಮೃತರ ಮನೆಗೂ ವೈಯಕ್ತಿಕವಾಗಿ ಭೇಟಿ ನೀಡುವುದಾಗಿ ಹಿಮಂತ ಬಿಸ್ವಾ ಶರ್ಮಾ ಭರವಸೆ ನೀಡಿದರು. ಇದನ್ನೂ ಓದಿ: ಬೆಳಗಾವಿ ಸುವರ್ಣ ಸೌಧದ 11 ಲಕ್ಷ ಕರೆಂಟ್ ಬಿಲ್ ಬಾಕಿ
ಶನಿವಾರವೇ ಮರಣೋತ್ತರ ಪರೀಕ್ಷೆಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿತ್ತು. ಗಾಯಾಳುಗಳಿಗೆ ಜೋರ್ಹಾಟ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ ವ್ಯವಸ್ಥೆ ಮಾಡಿದೆ. ಗುವಾಹಟಿ ಸೇರಿದಂತೆ ಇತರ ಆಸ್ಪತ್ರೆಗಳಿಂದ ಹೆಚ್ಚುವರಿ ವೈದ್ಯರನ್ನು ಕರೆಸಲಾಗಿದ್ದು, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮೇಕೆದಾಟು ನಮ್ಮ ಹಕ್ಕು, ಅಣೆಕಟ್ಟು ಕಟ್ಟಿ ತಮಿಳುನಾಡಿಗೂ ನೀರು ಕೊಡುತ್ತೇವೆ: ಡಿಕೆಶಿ
ಇನ್ನು ಅಪಘಾತಕ್ಕೆ ನಿಖರ ಕಾರಣ ತಿಳಿಯಲು ಸಮಗ್ರ ತನಿಖೆ ನಡೆಯುತ್ತಿದೆ. ದುರಂತಕ್ಕೆ ಕಾರಣವಾಗಿರುವ ಎಲ್ಲ ಸಾಧ್ಯತೆಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು. ನಲ್ಬಾರಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜಕೀಯ ಒತ್ತಡದ ಹಿನ್ನೆಲೆಯಲ್ಲಿ ಕೆಲವು ಸಂಚಾರ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿತ್ತು. ಆದರೆ, ಇಂತಹ ಸಡಿಲಿಕೆಗಳಿಗೆ ಅವಕಾಶ ನೀಡಬಾರದಿತ್ತು ಎಂಬ ಅಭಿಪ್ರಾಯ ನನಗೂ ಇತ್ತು ಎಂದು ತಿಳಿಸಿದರು. ಇದನ್ನೂ ಓದಿ: ಪ್ರಧಾನಿ ಫೋನ್ ಟ್ಯಾಪ್ ಮಾಡಲ್ಲ: ರಾಹುಲ್ ಗಾಂಧಿ ಆರೋಪಕ್ಕೆ ಸ್ಯಾಮ್ ಪಿತ್ರೋಡಾ ಅಚ್ಚರಿಯ ಹೇಳಿಕೆ
ಜನರ ಜೀವವೇ ಮುಖ್ಯವಾಗಿದ್ದು, ಇನ್ನು ಮುಂದೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಇಂತಹ ಅಪಘಾತಗಳು ಮರುಕಳಿಸದಂತೆ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲು ಮತ್ತು ನಿಯಮಗಳ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಹಿಮಂತ ಬಿಸ್ವಾ ಶರ್ಮಾ ಹೇಳಿದರು. ಇದನ್ನೂ ಓದಿ: ತಮಿಳುನಾಡಿನ ಕಡಲೂರಿನಲ್ಲಿ ಹಕ್ಕಿ ಜ್ವರ – 5 ಫಾರ್ಮ್ಗಳಲ್ಲಿ 35,647 ಕೋಳಿಗಳು ಸಾವು
