ಮಂಡ್ಯ: ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಕಾರನ್ನು ದುಷ್ಕರ್ಮಿಗಳ ಗ್ಯಾಂಗ್ ಅಡ್ಡಗಟ್ಟಿ 26 ಲಕ್ಷ ರೂ. ದರೋಡೆ ಮಾಡಿದ ಘಟನೆ ಮದ್ದೂರು (Maddduru) ಪಟ್ಟಣದ ಹೊರ ವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru – Mysuru Expressway) ನಡೆದಿದೆ.
ಮೈಸೂರಿನ (Mysuru) ಖಾಸಗಿ ಕಂಪನಿ ಉದ್ಯೋಗಿ ಗೋವಿಂದರಾಜು ಅವರು ತೆರಳುತ್ತಿದ್ದ ಐ-20 ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಹಣ ದೋಚಿ ಪರಾರಿಯಾಗಿದ್ದಾರೆ. ರಾತ್ರಿ 7 ಗಂಟೆ ಸುಮಾರಿಗೆ ಬೇರೆ ಕಂಪನಿಯಿಂದ ತಮ್ಮ ಕಂಪನಿಗೆ ಹಣ ವಿತರಣೆ ಮಾಡಲು ಮೈಸೂರಿನಿಂದ – ಬೆಂಗಳೂರಿಗೆ ತೆರಳುತ್ತಿದ್ದರು. ಪಟ್ಟಣದ ಹೊರ ವಲಯದ ಐಶ್ವರ್ಯ ಕಾನ್ವೆಂಟ್ ಬಳಿ ಇನ್ನೋವಾ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಗೋವಿಂದರಾಜು ಅವರ ಕಾರನ್ನು ಅಡ್ಡಗಟ್ಟಿ ಕಾರಿನ ಗಾಜು ಒಡೆದು, ಮಾರಕಾಸ್ತ್ರಗಳನ್ನು ತೋರಿಸಿ, ಬೆದರಿಕೆ ಹಾಕಿ 26 ಲಕ್ಷ ರೂ. ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ದೇಶಕ್ಕೆ ನುಸುಳಿದ್ದ ನಾಲ್ವರು ಬಾಂಗ್ಲಾಪ್ರಜೆಗಳು ಹುಬ್ಬಳ್ಳಿಯಲ್ಲಿ ಲಾಕ್
ಗೋವಿಂದರಾಜು ತಕ್ಷಣ ಮದ್ದೂರು ಪೊಲೀಸರಿಗೆ ಘಟನೆ ಕುರಿತು ಮಾಹಿತಿ ನೀಡಿದರು. ತಕ್ಷಣ ವೃತ್ತ ನಿರೀಕ್ಷಕ ನವೀನ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ವಿ.ಜೆ. ಶೋಭರಾಣಿ, ಎಎಸ್ಪಿ ತಿಮ್ಮಯ್ಯ, ಡಿವೈಎಸ್ಪಿ ಯಶ್ವಂತ್‌ಕುಮಾರ್ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ 4,500 ಕೋಟಿ ವಂಚನೆ ಆರೋಪ – ಪ್ರಕರಣ ಸಿಐಡಿಗೆ ವಹಿಸಿ ಸರ್ಕಾರ ಆದೇಶ

