Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿ ಬುಲೆಟ್‌ ರಹಸ್ಯ ಬಯಲು – ಬಿಜೆಪಿಯ 13 ಜನ ಸೇರಿ 26 ಮಂದಿ ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬಳ್ಳಾರಿ ಬುಲೆಟ್‌ ರಹಸ್ಯ ಬಯಲು – ಬಿಜೆಪಿಯ 13 ಜನ ಸೇರಿ 26 ಮಂದಿ ಅರೆಸ್ಟ್‌

Bellary

ಬಳ್ಳಾರಿ ಬುಲೆಟ್‌ ರಹಸ್ಯ ಬಯಲು – ಬಿಜೆಪಿಯ 13 ಜನ ಸೇರಿ 26 ಮಂದಿ ಅರೆಸ್ಟ್‌

Public TV
Last updated: January 4, 2026 8:18 pm
Public TV
Share
3 Min Read
Ballari 4
SHARE

– ಭರತ್ ರೆಡ್ಡಿ ಆಪ್ತನ ಗನ್‌ಮ್ಯಾನ್‌ನಿಂದಲೇ ಫೈರಿಂಗ್
– ಆಟೋದಲ್ಲಿ ಪೆಟ್ರೋಲ್‌ ಬಾಂಬ್‌ ತಂದಿದ್ದ ವಿಡಿಯೋ ವೈರಲ್‌

ಬೆಂಗಳೂರು/ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ಗಲಭೆ (Ballari Clash) ಸ್ಫೋಟಕ ತಿರುವು ಸಿಕ್ಕಿದೆ. ಮಾರಾಮಾರಿ ವೇಳೆ ಬುಲೆಟ್ ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ದೇಹ ಹೊಕ್ಕ ಗುಂಡು ಯಾರದ್ದು ಅನ್ನೋ ಸೀಕ್ರೆಟ್ ರಿವೀಲ್ ಆಗಿದೆ.

ಶಾಸಕ ಭರತ್ ರೆಡ್ಡಿ (Bharath Reddy) ಅತ್ಯಾಪ್ತ ಸತೀಶ್ ರೆಡ್ಡಿಯ ಗನ್‌ಮ್ಯಾನ್ ಗುರುಚರಣ್ ಸಿಂಗ್ ಫೈರ್ ಮಾಡಿದ್ದ ಬಂದೂಕಿನ ಬುಲೆಟ್ ತಗುಲಿಯೇ ರಾಜಶೇಖರ್ ಮೃತಪಟ್ಟಿದ್ದಾರೆ. 12 ಎಂಎಂ ಬುಲೆಟ್ ಅನ್ನು ರಾಜಶೇಖರ್ ದೇಹದಿಂದ ಪೋಸ್ಟ್ ಮಾರ್ಟಮ್ ವೇಳೆ ಹೊರ ತೆಗೆಯಲಾಗಿದೆ. ಹೊರ ತೆಗೆದ ಬುಲೆಟ್ ಫೋರೆನ್ಸಿಕ್‌ ಲ್ಯಾಬ್‌ಗೆ ಕಳುಹಿಸಲಾಗಿದೆ.

ರಾಜಶೇಖರ್ ಮೃತನ ದೇಹ ಹೊಕ್ಕಿದ್ದು 12 ಎಂಎಂ ಸಿಂಗಲ್‌ಬೋರ್ ಬುಲೆಟ್ ಎಂದು ಖಚಿತವಾಗಿದೆ. ಪ್ರಕರಣ ಸಂಬಂಧ ಪೊಲೀಸರು (Ballari Police) 5 ಬಂದೂಕುಗಳು ವಶಕ್ಕೆ ಪಡೆದಿದ್ದಾರೆ. ಫೈರಿಂಗ್ ಸಂಬಂಧ ಪಂಜಾಬ್ ಮೂಲದ ಗುರುಚರಣ್ ಸಿಂಗ್ ಜೊತೆಗೆ ಬಲ್ಜಿತ್ ಸಿಂಗ್, ಮಹೇಂದ್ರ ಸಿಂಗ್ ಅನ್ನೋ ಗನ್‌ಮ್ಯಾನ್‌ಗಳನ್ನು ಪೊಲೀಸರು ಬಂಧನ ಮಾಡಿ ವಿಚಾರಣೆಗೊಳಪಡಿಸಿದ್ದಾರೆ. ಗುರುಚರಣ್‌ನನ್ನ ಆತನ ರೂಮ್‌ಗೆ ಕರೆದೊಯ್ದು ಪೊಲೀಸರು ಮಹಜರು ಮಾಡಿ, ಬಳಿಕ ಎಸ್‌ಪಿ ಕಚೇರಿಗೆ ಕರೆತಂದು ಫಿಂಗರ್‌ಪ್ರಿಂಟ್, ಕಣ್ಣಿನ ಟೆಸ್ಟ್ ಮಾಡಿದ್ದಾರೆ.

ಬುಲೆಟ್‌ ರಹಸ್ಯ
ಅಂದಹಾಗೆ, 12 ಎಂಎಂ ಬುಲೆಟ್ (12 MM Bullet) ಕೇವಲ 4-5 ಅಡಿ ದೂರದಲ್ಲಿ ಗುಂಡು ಹಾರಿದ ಕಾರಣ ಓರ್ವ ಮಾತ್ರ ಸಾವನ್ನಪ್ಪಿದ್ದಾನೆ. ಒಂದೊಮ್ಮೆ 10 ಅಡಿಗಿಂತ ದೂರ ಹಾರಿದ್ದರೆ ಬುಲೆಟ್ ಸ್ಪ್ರೆಡ್‌ ಆಗಿ ಇನ್ನಷ್ಟು ಜನರ ಪ್ರಾಣ ತೆಗೆಯುವ ಹೋಗುವ ಸಾಧ್ಯತೆ ಇತ್ತು.

ಈ ನಡುವೆ ನಿನ್ನೆ 45 ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ, ಬಿಜೆಪಿಯ 13 ಜನ ಸೇರಿ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿ, ಮೆಡಿಕಲ್ ಟೆಸ್ಟ್ ನಡೆಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ಗೆ ಕರೆತರುತ್ತಿದ್ದಾರೆ. ಈ ಮಧ್ಯೆ, ಆರೋಪಿಗಳ ಬಂಧನ, ಚಾರ್ಜ್‌ಶೀಟ್‌ ಸಲ್ಲಿಕೆ ವಿಚಾರವಾಗಿ ಬ್ರೂಸ್‌ಪೇಟೆ ಪೊಲೀಸರು ಸಿಐಡಿ ಪೊಲೀಸ್ ವಿಭಾಗದ ಕಾನೂನು ಸಲಹೆಗಾರರಾಗಿರುವ ಮಹೇಶ್ ವೈದ್ಯ ಮೊರೆ ಹೋಗಿದ್ದಾರೆ.

ಪೆಟ್ರೋಲ್‌ ಬಾಂಬ್‌ ತಂದಿದ್ದ ವಿಡಿಯೋ ವೈರಲ್‌
ಗಂಗಾವತಿಯ ಶಾಸಕ ಜನಾರ್ದನ ರೆಡ್ಡಿ (Janardhana Reddy) ಮನೆ ಮೇಲೆ ದಾಳಿ ನಡೆಸಲು ಮೊದಲೇ ಪ್ಲ್ಯಾನ್ ಮಾಡಲಾಗಿತ್ತಾ..? ಅನುಮಾನ ಮೂಡಿದೆ. ಈ ಅನುಮಾನಕ್ಕೆ ಸಾಕ್ಷ್ಯ ಎಂಬಂತೆ ಮತ್ತೊಂದು ವಿಡಿಯೋ ಬಯಲಾಗಿದೆ. ಜನಾರ್ದನ ರೆಡ್ಡಿ ನಿವಾಸದ ಮೇಲೆ ದಾಳಿ ನಡೆಸಲು ಕಿಡಿಗೇಡಿಗಳು ಖಾಲಿ ಬಾಟಲ್, ಪೆಟ್ರೋಲ್ ಬಾಂಬ್‌ಗಳನ್ನು (Petrol Bomb) ಆಟೋದಲ್ಲಿ ತುಂಬಿಕೊಂಡು ಬಂದಿರೋದು ವಿಡಿಯೋದಲ್ಲಿ ಗೋಚರವಾಗಿದೆ.

ಬಳ್ಳಾರಿ ಗಲಾಟೆ ಬೆನ್ನಲ್ಲೇ ತಮಗೆ ಮತ್ತು ತಮ್ಮ ಕುಟುಂಬಕ್ಕೆ ʻಝೆಡ್ʼ ಶ್ರೇಣಿಯ ಭದ್ರತೆ ಒದಗಿಸಬೇಕು ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ಡಿಜಿಪಿ ಡಾ.ಎಂ.ಎ ಸಲೀಂ ಅವರಿಗೆ ಜನಾರ್ದನ ರೆಡ್ಡಿ ಪ್ರತ್ಯೇಕ ಪತ್ರ ಬರೆದು ಮನವಿ ಮಾಡಿದ್ದಾರೆ. ಜೊತೆಗೆ, ಶಾಸಕ ನಾರಾ ಭರತ್ ರೆಡ್ಡಿ ಮತ್ತು ಸತೀಶ್ ರೆಡ್ಡಿಯನ್ನು ಬಂಧಿಸಬೇಕು. ಘಟನೆಯನ್ನು ನಿಭಾಯಿಸದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಬೇಕು. ಭದ್ರತೆ ನೀಡದೇ ಇದ್ದರೆ ಮುಂದೆ ನನ್ನ ಮತ್ತು ಕುಟುಂಬದ ಮೇಲೆ ದಾಳಿ ನಡೆದರೆ ರಾಜ್ಯ ಸರ್ಕಾರವೇ ಹೊಣೆ ಎಂದು ಉಲ್ಲೇಖಿಸಿದ್ದಾರೆ. ಆದರೆ, ಈವರೆಗೆ ನನಗೆ ಪತ್ರ ಬಂದಿಲ್ಲ ಅಂತ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಪೊಲೀಸ್ ಗನ್ ಹಾಗೂ ರಿವಾಲ್ವರ್‌ನಿಂದ ಫೈರ್ ಆಗಿಲ್ಲ. ಇದನ್ನು ಎಡಿಜಿಪಿ ಖಾತ್ರಿ ಪಡಿಸಿದ್ದಾರೆ ಎಂದ ಪರಮೇಶ್ವರ್, ಖಾಸಗಿ ಗನ್‌ನಿಂದ ಫೈರ್ ಆಗಿರೋದು ಎಂದಿದ್ದಾರೆ. ಅಲ್ಲದೇ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಪ್ರಕರಣವನ್ನ ಸಿಐಡಿ ತನಿಖೆಗೆ ಕೊಡುವುದರ ಬಗ್ಗೆ ಯೋಚನೆ ಮಾಡ್ತಿದ್ದೇವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಮಾತಾಡ್ತೀನಿ, ಅಗತ್ಯ ಇದ್ರೆ ಸಿಐಡಿ ತನಿಖೆಗೆ ಒಪ್ಪಿಸ್ತೀವಿ ಎಂದಿದ್ದಾರೆ.

TAGGED:BallariBanner RiotBellari ClashBharath ReddybjpcongressJanardhana ReddypoliticsZameer Ahmed Khanಜನಾರ್ದನ ರೆಡ್ಡಿನಾರಾ ಭರತ್ ರೆಡ್ಡಿಬಳ್ಳಾರಿ ಗನ್‌ ಫೈಯರ್‌ಬಳ್ಳಾರಿ ಗಲಾಟೆಬುಲೆಟ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
1 hour ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
2 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
2 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
2 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
3 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?