ಗಾಂಧಿನಗರ: ಗುಜರಾತಿನ ಕಚ್ ಜಿಲ್ಲೆಯ ಕಾಂಡ್ಲಾಪೋರ್ಟ್‌ನಲ್ಲಿ ಗುಜರಾತ್ ಭಯೋತ್ಪಾದನ ನಿಗ್ರಹದಳ (ATS) ಹಾಗೂ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 1,300 ಕೋಟಿ ರೂ. ಮೌಲ್ಯದ ಹೆರಾಯಿನ್ ಪತ್ತೆಯಾಗಿದೆ.
ಒಟ್ಟು 260 ಕೆಜಿ ಹೆರಾಯಿನ್ ಇದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಬೆಲೆ 1,300 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಲಾರಿಯಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ!
Advertisement
ಕಂಟೈನರ್‌ಗಳಲ್ಲಿ ಭಾರತಕ್ಕೆ ಡ್ರಗ್ಸ್ ಸಾಗಣೆಯಾಗುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಗುಜರಾತ್ ಭಯೋತ್ಪಾದನ ನಿಗ್ರಹ ದಳವು ಡಿಆರ್‌ಐನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಕಂಟೈನರ್‌ನಲ್ಲಿದ್ದ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.