ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವದಿಯಲ್ಲಿ 270 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 4 ಮರಣ ಪ್ರಕರಣ ದಾಖಲಾಗಿದೆ. ಒಟ್ಟು 7,271 ಸಕ್ರಿಯ ಪ್ರಕರಣ ಪತ್ತೆಯಾಗಿದೆ.
Advertisement
ಇಂದು ಒಟ್ಟು 246 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 30,04,239 ಮಂದಿಗೆ ಕೊರೊನಾ ಬಂದಿದೆ. 29,58,630 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.48 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.27 ರಷ್ಟಿದೆ. ಬೆಂಗಳೂರಿನಲ್ಲಿ 152 ಪಾಸಿಟಿವ್ ಕೇಸ್ ಮತ್ತು 2 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ, ಪೀಣ್ಯ ಫ್ಲೈಓವರ್ ಸಂಚಾರ ಬಂದ್ – ಬದಲಿ ಮಾರ್ಗ ಇಲ್ಲಿದೆ
Advertisement
Advertisement
ರಾಜ್ಯದಲ್ಲಿ ಇಂದು ಒಟ್ಟು 91,707 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 97,782 ಸ್ಯಾಂಪಲ್ (ಆರ್ಟಿಪಿಸಿಆರ್ 84,336 + 13,446 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ನೈಟ್ ಕರ್ಫ್ಯೂಗೆ ಚಿಂತನೆ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 7, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 152, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 1, ಚಿತ್ರದುರ್ಗ 1, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 5, ಹಾವೇರಿ 0, ಕಲಬುರಗಿ 0, ಕೊಡಗು 25, ಕೋಲಾರ 6, ಕೊಪ್ಪಳ 0, ಮಂಡ್ಯ 2, ಮೈಸೂರು 13, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 14, ಉಡುಪಿ 14, ಉತ್ತರ ಕನ್ನಡ 5, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.