ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ಕಳೆದ 6 ತಿಂಗಳಲ್ಲಿ ಒಟ್ಟು 27 ಸಾವಿರ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿವೆ.ಇದನ್ನೂ ಓದಿ: ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿ ವಜಾ – ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ಪ್ರಜ್ವಲ್ ರೇವಣ್ಣ
ಮೆಟ್ರೋದಲ್ಲಿ ಪ್ರಯಾಣಿಸುವಾಗ ನಿಯಮ ಉಲ್ಲಂಘಿಸಿದ್ದು, ಕಳೆದ 6 ತಿಂಗಳಲ್ಲಿ ಒಟ್ಟು 27 ಸಾವಿರ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ನಿಯಮ ಉಲ್ಲಂಘನೆ ಮಾಡಿದವರಿಗೆ ಭದ್ರತಾ ಸಿಬ್ಬಂದಿ ದಂಡ ವಿಧಿಸದೇ ಎಚ್ಚರಿಕೆ ನೀಡಿದ್ದಾರೆ.
ಒಟ್ಟು 27 ಸಾವಿರ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ಆ ಪೈಕಿ ಮೊಬೈಲ್‌ನಲ್ಲಿ ಜೋರಾಗಿ ಸಂಗೀತ ಹಾಕಿದ್ದಕ್ಕಾಗಿ 11,922 ಪ್ರಕರಣಗಳು, ವಿಶೇಷ ಚೇತನರು, ಗರ್ಭಿಣಿಯರು, ಹಿರಿಯ ನಾಗರಿಕರಿಗೆ ಆಸನ ನೀಡದಿದ್ದಕ್ಕಾಗಿ 14,162 ಪ್ರಕರಣಗಳು, ಮೆಟ್ರೋದಲ್ಲಿ ಆಹಾರ ಸೇವಿಸಿದ್ದಕ್ಕಾಗಿ 554 ಹಾಗೂ ದೊಡ್ಡ ಗಾತ್ರದ ಲಗೇಜ್ ಸಾಗಿಸಿದ್ದಕ್ಕೆ 474 ಪ್ರಕರಣಗಳು ದಾಖಲಾಗಿವೆ.ಇದನ್ನೂ ಓದಿ: ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಜಡ್ಜ್‌ಗಳ ಆಸ್ತಿ ವಿವರ ಬಹಿರಂಗ – ವೆಬ್‍ಸೈಟ್‌ಲ್ಲಿ ಮಾಹಿತಿ ಅಪ್ಲೋಡ್‍ಗೆ ನಿರ್ಧಾರ