ಹಾಸನ: ಹಿಂದೆಂದಿಗಿಂತಲೂ ಈ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಭಕ್ತರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಇಂದು ಬೆಳಗ್ಗೆ 6 ಗಂಟೆವರೆಗೆ ಬರೋಬ್ಬರಿ 28.75 ಲಕ್ಷ ಭಕ್ತರು ಹಾಸನಾಂಬೆಯ ದರ್ಶನ ಪಡೆದಿದ್ದಾರೆ ಎಂದು ದೇವಾಲಯದ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್ ತಿಳಿಸಿದ್ದಾರೆ.
ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿದ ಅವರು, ಇಂದು ಬೆಳಗ್ಗೆ 6 ಗಂಟೆವರೆಗೆ 28.72 ಲಕ್ಷ ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲ, 1,000 ರೂ., 300 ರೂ. ವಿಶೇಷ ದರ್ಶನದ ಟಿಕೆಟ್ ಹಾಗೂ ಲಾಡು ಮಾರಾಟದಿಂದ ಬರೋಬ್ಬರಿ 24.14 ಕೋಟಿ ರೂ. ಆದಾಯ ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ.
ಇಂದು ರಾತ್ರಿ ಸಿದ್ದೇಶ್ವಸ್ವಾಮಿ ರಥೋತ್ಸವ ಹಾಗೂ ನಾಳೆ ಬೆಳಗ್ಗೆ ಕೆಂಡೋತ್ಸವ ಇರಲಿದೆ. ಹಾಗಾಗಿ ಹಾಕಿರುವ ಬ್ಯಾರಿಕೇಡ್ಗಳನ್ನ ತೆಗೆಯಬೇಕಿದೆ. ಸಂಜೆ 6 ಗಂಟೆಯವರೆಗೆ ನಿರಂತರ ಸಾರ್ವಜನಿಕರಿಗೆ ದೇವಿ ದರ್ಶನ ಇರುತ್ತದೆ. ಮಧ್ಯಾಹ್ನ 3 ರೊಳಗೆ ಸರತಿ ಸಾಲಿನೊಳಗೆ ಸೇರಿಕೊಳ್ಳಬೇಕು. ಅವರಿಗೆ ಮಾತ್ರ ಹಾಸನಾಂಬ ದೇವಿ ದರ್ಶನಕ್ಕೆ ಮಾತ್ರ ಅವಕಾಶವಿರುತ್ತದೆ ಎಂದು ಹೇಳಿದ್ದಾರೆ.

